CINE | ಅವಾರ್ಡ್‌ ಫಂಕ್ಷನ್‌ನಲ್ಲಿ ಶಿವಣ್ಣನ ಕಾಲುಮುಟ್ಟಿ ನಮಸ್ಕರಿಸಿದ ಐಶ್ವರ್ಯಾ ರೈ ಪುತ್ರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಟಿ ಐಶ್ವರ್ಯಾ ರೈ ಪುತ್ರಿ ಆರಾಧ್ಯ ಅವಾರ್ಡ್‌ ಫಂಕ್ಷನ್‌ ಒಂದರಲ್ಲಿ ಶಿವರಾಜ್‌ಕುಮಾರ್‌ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಈ ವಿಡಿಯೋ ವೈರಲ್‌ ಆಗಿದೆ.

ಐಶ್ವರ್ಯಾ ರೈ ಹಾಗೂ ಅವರ ಮಗಳು ಆರಾಧ್ಯಾ ಇತ್ತೀಚೆಗೆ ಸೈಮಾ ಅವಾರ್ಡ್ಸ್​​ಗೆ ತೆರಳಿದ್ದರು. ದುಬೈನಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಕನ್ನಡದ ಹಲವು ಹೀರೋಗಳು ಇದರಲ್ಲಿ ಭಾಗಿ ಆಗಿದ್ದರು. ಶಿವರಾಜ್​ಕುಮಾರ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಐಶ್ವರ್ಯಾ ಹಾಗೂ ಶಿವರಾಜ್​ಕುಮಾರ್ ಅವರ ಭೇಟಿ ಆಗಿದೆ.

ಶಿವರಾಜ್​ಕುಮಾರ್ ಹಾಗೂ ವಿಕ್ರಂ ಭೇಟಿ ಆದರು. ಈ ವೇಳೆ ಅಲ್ಲೇ ಇದ್ದ ಐಶ್ವರ್ಯಾ ರೈ ಅವರು ಶಿವರಾಜ್​ಕುಮಾರ್ ಅವರನ್ನು ನೋಡುತ್ತಿದ್ದಂತೆ ಓಡೋಡಿ ಬಂದು ಶಿವಣ್ಣನಿಗೆ ಶೇಕ್​ಹ್ಯಾಂಡ್ ಮಾಡಿದರು. ಇದರ ಜೊತೆಗೆ ಅಲ್ಲೇ ಇದ್ದ ಮಗಳಿಗೆ ಶಿವರಾಜ್​ಕುಮಾರ್ ಅವರನ್ನು ಪರಿಚಯಿಸಿದರು. ಆಗ ಆರಾಧ್ಯಾ ಅಲ್ಲಿಯೇ ಶಿವಣ್ಣನ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಶಿವಣ್ಣ ಆರಾಧ್ಯಾಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!