ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರುನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು ಹಾಗೂ ದೂರದೃಷ್ಟಿಯ ಕನಸುಗಾರ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ವಿಷಾದ ವ್ಯಕ್ತಪಡಿಸಿದ್ದಾರೆ.
ಅವರು ತಮ್ಮ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ, ಈ ಬಗ್ಗೆ ಭಾವನಾತ್ಮಕ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾರೆ. “ಒಬ್ಬ ರಾಜಕಾರಣಿ ಯಾರನ್ನೂ, ತಮ್ಮ ಪ್ರತಿಸ್ಪರ್ಧಿಗಳನ್ನು ಸಹ ದ್ವೇಷಿಸಿ ಮಾತನಾಡಲಿಲ್ಲ. ಭವಿಷ್ಯದ ದೃಷ್ಟಿಯುಳ್ಳವ, ದಯಾಮಯಿ ಅನುಕಂಪದಿಂದ ಕೂಡಿರುವ, ಸುಂದರವಾಗಿ ಮಾತನಾಡುವ, ವಿದ್ಯಾವಂತ, ಹಾಸ್ಯಭರಿತ ವ್ಯಕ್ತಿತ್ವದವರು ನೀವು… ನಿಮ್ಮಂತೆ ಮತ್ತೊಬ್ಬರು ಇರಲು ಆಗುವುದಿಲ್ಲ.. ಎಲ್ಲದಕ್ಕಾಗಿ ಧನ್ಯವಾದಗಳ” ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.