ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ಮರು ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪಾಕಿಸ್ತಾನದ ಉಗ್ರರ ವಿರುದ್ಧ ಸರ್ಜಿಕಲ್‌ ಸ್ಟ್ರೈಕ್, ಬಾಲಾಕೋಟ್‌ ವಾಯುದಾಳಿ ಸೇರಿ ಹಲವು ಕಾರ್ಯಾಚರಣೆಗಳ ಸೂತ್ರಧಾರಿ, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರನ್ನು ಕೇಂದ್ರ ಸರ್ಕಾರವು ಮೂರನೇ ಅವಧಿಗೂ ಸಲಹೆಗಾರರನ್ನಾಗಿ ನೇಮಕ ಮಾಡಿದೆ . ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮುಖ್ಯ ಕಾರ್ಯದರ್ಶಿಯಾಗಿ ಪಿ.ಕೆ.ಮಿಶ್ರಾ ಅವರೇ ಮುಂದುವರಿಯಲಿದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಅಜಿತ್ ದೋವಲ್‌ ಅವರನ್ನು ಮೂರನೇ ಅವಧಿಗೆ ನೇಮಿಸಿರುವ ಕುರಿತು ಸಂಪುಟದ ನೇಮಕಾತಿ ಸಮಿತಿಯು ಆದೇಶ ಹೊರಡಿಸಿದೆ.

ನೂತನ ಆದೇಶದ ಪ್ರಕಾರ, ಅಜಿತ್‌ ದೋವಲ್‌ ಅವರು ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವವರೆಗೆ ಅಥವಾ ಮುಂದಿನ ಆದೇಶದವರೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಇರಲಿದ್ದಾರೆ. ಇದೇ ನಿಯಮವು ಪಿ.ಕೆ.ಮಿಶ್ರಾ ಅವರಿಗೂ ಅನ್ವಯವಾಗಲಿದೆ ಎಂದು ತಿಳಿಸಿವೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!