NCP ಶಾಸಕಾಂಗ ಪಕ್ಷದ ನಾಯಕರಾಗಿ ಅಜಿತ್ ಪವಾರ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯವಾದಿ ಕಾಂಗ್ರೆಸ್ NCP ಶಾಸಕಾಂಗದ ಪಕ್ಷದ ನಾಯಕರಾಗಿ ಅಜಿತ್ ಪವಾರ್ ಭಾನುವಾರ ಆಯ್ಕೆಯಾಗಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಸಂಸದ ಸುನೀತ್ ತಟ್ಕರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮತ್ತು ಅವರ ಸಹೋದ್ಯೋಗಿ ಅನಿಲ್ ಪಾಟೀಲ್ ಅವರನ್ನು ಮುಖ್ಯ ಸಚೇತಕರನ್ನಾಗಿ ಮರು ನೇಮಕ ಮಾಡಲಾಯಿತು.

ನ್‌ಸಿಪಿ ಮತ್ತು ಅದರ ಮಹಾಯುತಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 288 ಸ್ಥಾನಗಳಲ್ಲಿ 233 ಸ್ಥಾನಗಳನ್ನು ಗಳಿಸುವ ಮೂಲಕ ಅದ್ಭುತ ಪ್ರದರ್ಶನವನ್ನು ನೀಡಿವೆ.

NCP ಅಜಿತ್ ಪವಾರ್ ಬಣ ಸ್ಪರ್ಧಿಸಿದ 59 ಸ್ಥಾನಗಳಲ್ಲಿ 41 ಸ್ಥಾನಗಳನ್ನು ಪಡೆದಿದೆ. ಅದರ ಪ್ರತಿಸ್ಪರ್ಧಿ ಬಣವಾದ ಎನ್‌ಸಿಪಿ (ಎಸ್‌ಪಿ)ಯನ್ನು 29 ಸ್ಥಾನಗಳಲ್ಲಿ ಸೋಲಿಸಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!