ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ನಾಳೆ (ಗುರುವಾರ) ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.
ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಮಾಹಿತಿ ನೀಡಿದ್ದು, ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲ ಪಕ್ಷದ ನಾಯಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದೆ.
ಡಿಸಿಎಂ ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ನಾಳೆಯವರೆಗೂ ಬಾರಾಮತಿಯಲ್ಲಿರುವ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಇರಿಸಲಾಗುವುದು. ಅಲ್ಲಿ ಜನರು ಮೃತ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.



