ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಪೇನ್‌ನಲ್ಲಿ ನಡೆದ ರೇಸ್‌ನಲ್ಲಿ ನಟ ಅಜಿತ್ ಕುಮಾರ್ ಅವರ ಕಾರು ಅಪಘಾತಕ್ಕೀಡಾಗಿದೆ. ತಮಿಳಿನ ಸೂಪರ್ ಸ್ಟಾರ್ ನಟ ಅಜಿತ್, ಕಾರು ರೇಸಿಂಗ್ನಲ್ಲಿ ಅತಿಯಾದ ಆಸಕ್ತಿ ಹೊಂದಿದ್ದಾರೆ. ವಿದೇಶಗಳಲ್ಲಿ ವೃತ್ತಿಪರ ರೇಸಿಂಗ್ನಲ್ಲಿ ಸಹ ಅಜಿತ್ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಕೆಲ ವಾರಗಳ ಹಿಂದಷ್ಟೆ ರೇಸ್ ಟ್ರ್ಯಾಕ್ನಲ್ಲಿ ಅಜಿತ್ ಅವರ ಕಾರು ಅಪಘಾತಕ್ಕೆ ಈಡಾಗಿತ್ತು, ಇದೀಗ ಅಜಿತ್ ಅವರ ಕಾರು ಮತ್ತೊಮ್ಮೆ ಅಪಘಾತಕ್ಕೆ ಈಡಾಗಿದೆ. ಸ್ಪೇಸ್ನ ರೇಸ್ ಇವೆಂಟ್ ಒಂದರಲ್ಲಿ ಭಾಗಿಯಾಗಿದ್ದಾಗ ಈ ಅವಘಡ ನಡೆದಿದ್ದು, ಅಜಿತ್ ಅವರು ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿ ಎರಡು ಬಾರಿ ಪಲ್ಟಿಯಾಗಿದೆ. ಆದರೆ ಅಜಿತ್ಗೆ ಯಾವುದೇ ಗಾಯಗಳಾಗಿಲ್ಲ.
ಅಜಿತ್ ಅವರ ವ್ಯವಸ್ಥಾಪಕ ಸುರೇಶ್ ಚಂದ್ರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು. ಈ ವೀಡಿಯೋ ವೈರಲ್ ಆಗಿದ್ದು ಅವರ ಸುರಕ್ಷತೆಯ ಬಗ್ಗೆ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ.