ತೆಲಂಗಾಣ ವಿಧಾನಸಭೆ ಹಂಗಾಮಿ ಸ್ಪೀಕರ್‌ ಆಗಿ ಅಕ್ಬರುದ್ದೀನ್ ಓವೈಸಿ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್‌ ಆಗಿ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅಕ್ಬರುದ್ದೀನ್ ಓವೈಸಿ ಅವರಿಗೆ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಕೂಡ ಉಪಸ್ಥಿತರಿದ್ದರು.

ಹಂಗಾಮಿ ಸ್ಪೀಕರ್‌ ಅವಧಿ ತಾತ್ಕಾಲಿಕವಾಗಿದ್ದು, ನೂತನ ಸ್ಪೀಕರ್‌ ಆಯ್ಕೆಯಾಗುವವರೆಗೆ ಮಾತ್ರ ಓವೈಸಿ ಅವರ ಅಧಿಕಾರಾವಧಿ ಇರುತ್ತದೆ.

ತೆಲಂಗಾಣ ಚುನಾವಣೆಯ ಫಲಿತಾಂಶ ಇತ್ತೀಚೆಗಷ್ಟೇ ಹೊರಬಿದ್ದಿದೆ. 119 ಸ್ಥಾನಗಳ ಪೈಕಿ 64 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆದ್ದಿದೆ. ಆಡಳಿತಾರೂಢವಾಗಿದ್ದ ಭಾರತ್‌ ರಾಷ್ಟ್ರ ಸಮಿತಿ 39 ಹಾಗೂ ಬಿಜೆಪಿ 8 ಸ್ಥಾನಗಳನ್ನ ಪಡೆದುಕೊಂಡಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (TPCC) ಅಧ್ಯಕ್ಷರಾಗಿದ್ದ ರೇವಂತ್ ರೆಡ್ಡಿ ಅವರು ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!