ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕನ್ನಡಪರ ಸಂಘಟನೆಗಳಿಂದ ಮಹತ್ವದ ಸಭೆ ನಡೆಯಲಿದೆ.
ಇಂದು ಬೆಳಗ್ಗೆ 11 ಘಂಟೆಗೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಸಭೆ ಹಮ್ಮಿಕೊಳ್ಳಲಾಗಿದ್ದು,
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಯಲಿದೆ.
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರವಾಗಿ ಬಂದ್‌ಗೆ ಕರೆ ನೀಡುವ ಬಗ್ಗೆ ಎಲ್ಲಾ ಸಂಘಟನೆಗಳು ಚರ್ಚೆ ನಡೆಸಲಿದ್ದಾರೆ. ಸಭೆಯ ಬಳಿಕ ಕನ್ನಡ ಒಕ್ಕೂಟದಿಂದ ಬಂದ್ ಬಗ್ಗೆ ಅಧಿಕೃತ ಮಾಹಿತಿ ಹೊರ ಬೀಳಲಿದೆ.