ಹೊಸ ದಿಗಂತ ವರದಿ, ಶಿರಸಿ:
ಟಿಕೆಟ್ ಅತೃಪ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದೆ. ಭಾನುವಾರ ಕಾಂಗ್ರೆಸ್ ನ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಶಿರಸಿಯ ಸ್ಪೀಕರ್ ಕಚೇರಿಗೆ ಬೆಂಗಳೂರಿನಿಂದ ಆಗಮಿಸಿದ ಶ್ರೀನಿವಾಸ ಮೂರ್ತಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು.
ಅಖಂಡ ಶ್ರೀನಿವಾಸ ಮೂರ್ತಿ 2018 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಗೆಲುವು ದಾಖಲಿಸಿದ್ದರು.