ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಇಂಡಿಯಾ ಮೈತ್ರಿ ಕೂಟದಲ್ಲಿ ಸೀಟು ಹಂಚಿಕೆ ಮಾತುಕತೆ ನಿರಂತರಾಗಿ ನಡೆಯುತ್ತಿದೆ. ಯಾವುದೇ ರಾಜ್ಯದಲ್ಲಿ ಸೀಟು ಹಂಚಿಕೆ ಅಂತಿಮಗೊಂಡಿಲ್ಲ. ಇದರ ನಡುವೆ ಮೈತ್ರಿ ಒಳಗಿನ ಪಕ್ಷಗಳೇ ಅಸಮಾಧಾನ ಹೊರಹಾಕುತ್ತಿದೆ.
ಉತ್ತರ ಪ್ರದೇಶದ ಸಮಾಜವಾದಿ ಪಾರ್ಟಿ ಸೀಟು ಹಂಚಿಕೆ ಫೈನಲ್ ಆಗುವ ಮೊದಲೇ ಲೋಕಸಭಾ ಚುನಾವಣಾ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಇದೀಗ 11 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. 2ನೇ ಪಟ್ಟಿಯಲ್ಲಿ ಘಾಜಿಪುರ ಕ್ಷೇತ್ರದಿಂದ ಅಫ್ಜಲ್ ಅನ್ಸಾರಿಯನ್ನು ಎಸ್‌ಪಿ ಕಣಕ್ಕಿಳಿಸಿದೆ.
ಇದಕ್ಕೂ ಮೊದಲು 16 ಅಭ್ಯರ್ಥಿಗಳ ಪಟ್ಟಿಯನ್ನು ಎಸ್‌ಪಿ ಬಿಡುಗಡೆ ಮಾಡಿತ್ತು. ಈ ವೇಳೆ ಸಮಾಜವಾಜಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪತ್ನಿಗೆ ಮಣಿಪುರಿ ಕ್ಷೇತ್ರದಿಂದ ಟಿಕೆಟ್ ನೀಡಿತ್ತು.