Thursday, March 23, 2023

Latest Posts

ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾದ ಕನ್ನಡ ʻಬಿಗ್ ಬಾಸ್ʼ ಖ್ಯಾತಿಯ ಅಕ್ಷತಾ ಕುಕ್ಕಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡದ ʻಬಿಗ್ ಬಾಸ್ʼ (Bigg Boss Kannada) ಮೂಲಕ ಚಿರಪರಿಚಿತವಾದ ಅಕ್ಷತಾ ಕುಕ್ಕಿ (Akshatha Kuki) ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಡಲು ನಟಿ ಅಕ್ಷತಾ ರೆಡಿಯಾಗಿದ್ದಾರೆ.

ಬಿಗ್ ಬಾಸ್ ಒಟಿಟಿಗೆ (Bigg Boss Ott) ಕಾಲಿಡುವ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದ ಸ್ಪರ್ಧಿ ಅಕ್ಷತಾ ಕುಕ್ಕಿ ಅವರು ಸೀರಿಯಲ್ ಮತ್ತು ಒಂದಿಷ್ಟು ಸಿನಿಮಾಗಳಲ್ಲಿ ನಟಿಸಿದ್ದರು.
`ಮಾರ್ಟಿನ್’ (Martin Film) ಚಿತ್ರದಲ್ಲಿ ಧ್ರುವ ಸರ್ಜಾ (Dhruva Sarja) ಜೊತೆ ಅಕ್ಷತಾ ಕುಕ್ಕಿ (Akshatha Kuki) ನಟಿಸಿದ್ದಾರೆ.
ಸಿನಿಮಾ ರಿಲೀಸ್ ರೆಡಿಯಾಗುತ್ತಿರುವ ಬೆನ್ನಲ್ಲೇ ನಟಿ ಅಕ್ಷತಾ ತಮ್ಮ ವೈಯಕ್ತಿಕ ಬದುಕಿನ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.

ಗುರುಹಿರಿಯರು ನಿಶ್ಚಯಿಸಿದ ವರನ ಜೊತೆ ಈಗಾಗಲೇ ಎಂಗೇಜ್‌ಮೆಂಟ್ ಮಾಡಿಕೊಂಡಿರುವ ನಟಿ ಮುಂದಿನ ತಿಂಗಳು ಮಾರ್ಚ್‌ನಲ್ಲಿ ಹಸೆಮಣೆ (Wedding) ಏರುತ್ತಿದ್ದಾರೆ. ಮದುವೆ ಪಕ್ಕಾ ಅರೆಂಜ್ ಮ್ಯಾರೇಜ್ ಆಗಿದೆ. ಅವಿನಾಶ್ (Avinash) ಜೊತೆ ಮಾರ್ಚ್ 27ರಂದು ಅಕ್ಷತಾ ಸಪ್ತಪದಿ ತುಳಿಯುತ್ತಿದ್ದಾರೆ. ಬೆಳಗಾವಿಯಲ್ಲಿ (Belagavi) ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯಲಿದೆ ಎಂದು ನಟಿ ಅಕ್ಷತಾ ತಿಳಿಸಿದ್ದಾರೆ.

ವರ ಅವಿನಾಶ್, ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ (Engineer) ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಮದುವೆಗೆ ಸಕಲ ತಯಾರಿ ನಡೆಯುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!