ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತೊಂದು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ . ಏಪ್ರಿಲ್ 18ರಂದು ಬಿಡುಗಡೆ ಆಗಲಿರುವ ‘ಕೇಸರಿ: ಚಾಪ್ಟರ್ 2’ ಸಿನಿಮಾದಲ್ಲಿ ರಿಯಲ್ ಕಹಾನಿ ಇದೆ. ಈ ಸಿನಿಮಾದ ಟ್ರೇಲರ್ ಇಂದು ಬಿಡುಗಡೆ ಆಗಿದೆ.
ಜಲಿಯನ್ವಾಲಾ ಬಾಗ್ ಹತ್ಯಾಕಾಂಡದ ಘಟನೆಯನ್ನು ಆಧರಿಸಿ ‘ಕೇಸರಿ: ಚಾಪ್ಟರ್ 2’ ಸಿನಿಮಾ ಮೂಡಿಬಂದಿದೆ.
ಕರಣ್ ಸಿಂಗ್ ತ್ಯಾಗಿ ಅವರು ‘ಕೇಸರಿ: ಚಾಪ್ಟರ್ 2’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಹೀರೂ ಯಶ್ ಜೋಹರ್, ಅರುಣಾ ಭಾಟಿಯಾ, ಕರಣ್ ಜೋಹರ್, ಆಧಾರ್ ಪೂನಾವಾಲ ಮುಂತಾದವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅಕ್ಷಯ್ ಕುಮಾರ್, ಆರ್. ಮಾಧವನ್, ಅನನ್ಯಾ ಪಾಂಡೆ ಮುಂತಾದ ಕಲಾವಿದರು ‘ಕೇಸರಿ: ಚಾಪ್ಟರ್ 2’ ಸಿನಿಮಾದಲ್ಲಿ ನಟಿಸಿದ್ದಾರೆ.
1919ರ ಏಪ್ರಿಲ್ 13ರಂದು ಜಲಿಯನ್ವಾಲಾ ಬಾಗ್ ಹತ್ಯಾಕಾಂಡ ನಡೆಯಿತು. ಬ್ರಿಟಿಷ್ ಸರ್ಕಾರದ ಈ ಕೃತ್ಯವನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ ಲಾಯರ್ ಶಂಕರನ್ ನಾಯರ್ ಕುರಿತು ‘ಕೇಸರಿ: ಚಾಪ್ಟರ್ 2’ ಸಿನಿಮಾ ಮೂಡಿಬಂದಿದೆ. ಶಂಕರನ್ ನಾಯರ್ ಪಾತ್ರವನ್ನು ಅಕ್ಷಯ್ ಕುಮಾರ್ ಮಾಡಿದ್ದಾರೆ. ಕೋರ್ಟ್ನಲ್ಲಿನ ವಾದ-ಪ್ರತಿವಾದದ ದೃಶ್ಯಗಳು ಟ್ರೇಲರ್ನಲ್ಲಿ ಹೈಲೈಟ್ ಆಗಿವೆ.
ಅಕ್ಷಯ್ ಕುಮಾರ್ ಅವರು ಇತ್ತೀಚಿನ ವರ್ಷಗಳಲ್ಲಿ ಗೆಲುವು ಕಂಡಿಲ್ಲ. 2025ರ ಆರಂಭದಲ್ಲಿ ಬಿಡುಗಡೆ ಆದ ಅಕ್ಷಯ್ ಕುಮಾರ್ ನಟನೆಯ ‘ಸ್ಕೈ ಫೋರ್ಸ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸೋತಿತು. ಇದೀಗ ‘ಕೇಸರಿ: ಚಾಪ್ಟರ್ 2’ ಸಿನಿಮಾ ಮೂಲಕ ಗೆಲುವು ಕಾಣುವ ನಿರೀಕ್ಷೆಯಲ್ಲಿ ಅವರು ಇದ್ದಾರೆ.