ಹೊಸ ದಿಗಂತ ವರದಿ, ಮಂಗಳೂರು:
ಕೇರಳದಲ್ಲಿ ಬಿಸಿಲಿನ ತಾಪ ನೆತ್ತಿ ಸುಡುತ್ತಿರುವ ನಡುವೆಯೇ ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂಬ ಸಂತಸದ ಸುದ್ದಿಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ.
ಇದರೊಂದಿಗೆ ಕಾಸರಗೋಡು ಜಿಲ್ಲೆ ಸಹಿತ ಪಾಲಕ್ಕಾಡ್, ಕೊಲ್ಲಂ, ಕೊಟ್ಟಾಯಂ, ಕೋಝಿಕ್ಕೋಡ್, ತ್ರಿಶೂರ್‌ಗಳಲ್ಲಿ ತಾಪಮಾನ ಇನ್ನಷ್ಟು ಏರಿಕೆಯಾಗುವ ಎಚ್ಚರಿಕೆಯನ್ನೂ ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.