ಅಯ್ಯೋ ! ಇಂಥ ತಾಯಿನೂ ಇರ್ತಾರಾ? ತನ್ನ ಕರುಳ ಕುಡಿಯನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಹೊರವಲಯದ ವಿಶ್ವೇಶ್ವರಪುರದಲ್ಲಿ ಹೃದಯವಿದ್ರಾವಕ ಘಟನೆಯೊಂದು ವರದಿಯಾಗಿದೆ. ಕೇವಲ ಒಂದೂವರೆ ತಿಂಗಳ ಹಸುಗೂಸು ಗಂಡು ಮಗುವನ್ನು ನೀರು ಕಾಯುವ ಹಂಡೆಯಲ್ಲಿ ಮುಳುಗಿಸಿ ತಾಯಿ ಕೊಲೆ ಮಾಡಿದ್ದಾಳೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದ್ದು, ಸ್ಥಳೀಯರಲ್ಲಿ ಭಯ ಹಾಗೂ ಆಕ್ರೋಶ ಮೂಡಿಸಿದೆ.

ಪೊಲೀಸ್ ಮೂಲಗಳ ಪ್ರಕಾರ, ಪವನ್ ಮತ್ತು ರಾಧಾ ದಂಪತಿಗೆ ಬಡತನ ಹಾಗೂ ಮಗುವಿನ ಆರೈಕೆ ಕಷ್ಟವಾದ ಹಿನ್ನೆಲೆ ಈ ಹೀನ ಕೃತ್ಯಕ್ಕೆ ಮೊರೆ ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಗುರುವಾರ ರಾತ್ರಿ ನಡೆದಿದ್ದು, ಶೌಚಾಲಯದಲ್ಲಿ ನೀರು ಕಾಯಿಸುವ ಹಂಡೆಯಲ್ಲಿ ಮಗುವನ್ನು ಮುಳುಗಿಸಿ ಕೊಲೆ ಮಾಡಲಾಗಿದೆ. ಕೂಡಲೇ ಸ್ಥಳಕ್ಕೆ ನಿಲುಗುಂಡು ಪೋಲಿಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪ್ರಕರಣದ ತನಿಖೆ ಆರಂಭಿಸಿದ್ದಾರೆ. ತಾಯಿ ರಾಧಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಯುತ್ತಿದೆ.

ಮಗುವಿನ ತಂದೆ ಪವನ್ ಆಟೋ ಡ್ರೈವರ್ ಆಗಿದ್ದು, ಪ್ರತಿದಿನ ಮದ್ಯಪಾನ ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಪತಿ-ಪತ್ನಿ ನಡುವೆ ಜಗಳ ಹಾಗೂ ಮನಸ್ತಾಪ ಕೂಡ ಇದ್ದು, ಈ ಹಿನ್ನಲೆಯಲ್ಲಿ ಮಗುವಿನ ಹತ್ಯೆ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Logged in as Ashika HD. Log out?

Please enter your comment!

error: Content is protected !!