ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ವಿತರಿಸಿದ ಆರೋಪದ ಮೇಲೆ ನೆಲಮಂಗಲದ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಕ್ಕಾಗಿ ರಾಜ್ಯಾಧ್ಯಕ್ಷರ ನಿರ್ದೇಶನದ ಮೇರೆಗೆ ಜಗದೀಶ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಹೇಳಿದರು.
ಜುಲೈ 7 ರಂದು ನೆಲಮಂಗಲದಲ್ಲಿ ಆಯೋಜಿಸಲಾಗಿದ್ದ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಸನ್ಮಾನ ಸಮಾರಂಭದಲ್ಲಿ ಘಟನೆ ನಡೆದಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಮದ್ಯ ಹಂಚಿಕೆ ಮಾಡಲಾಗಿತ್ತು. ಅಲ್ಲದೇ, ಎಣ್ಣೆಗಾಗಿ ಸಾರ್ವಜನಿಕರು ಸಹ ಮುಗಿಬಿದ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಟೀಕೆಗಳು ವ್ಯಕ್ತವಾಗಿದ್ದವು.