ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪಡೆ ಸಿಐಎಸ್ಎಪ್ ಸಿಬ್ಬಂದಿಯಿಂದ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಪಾಕ್ ಗಡಿ ಭಾಗದ ಏರ್ಪೋರ್ಟ್ಗೆ ತೆರಳುವ ವಿಮಾನಗಳನ್ನು ರದ್ದು ಮಾಡಲಾಗಿದೆ. ಈ ಮಧ್ಯೆ ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸುವಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ ಪ್ರಯಾಣಿಕರಿಗೆ ಸೂಚನೆ ನೀಡಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸಲು ಕೋರುತ್ತೇವೆ.
ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯನ್ನು ಹೆಚ್ಚಿಸಿದ ಕಾರಣ ಈ ಸೂಚನೆಯನ್ನು ನೀಡಲಾಗಿದೆ.
ಮುಂದುವರೆದು, ಪ್ರಯಾಣಿಕರು ತಾವು ಪ್ರಯಾಣ ಮಾಡಲಿರುವ… pic.twitter.com/QsXrsxf98v
— ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (@blrairport_kn) May 9, 2025