ಹೊಸದಿಗಂತ ಆನ್ಲೈನ್ ಡೆಸ್ಕ್:
ಇಂದು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತು ಅಂಗನವಾಡಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
ಸಾರಿಗೆ ನೌಕರರು ಡಿಸೆಂಬರ್ನಲ್ಲಿ ಮುಷ್ಕರ ಕೈಗೊಂಡಿದ್ದು, ಆ ವೇಳೆ ಸರ್ಕಾರ ಒಂಬತ್ತು ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು.
ಅದರಲ್ಲಿ ವೇತನ ಆಯೋಗ ಅತಿ ಮುಖ್ಯವಾದ್ದು. ಇನ್ನೇನು ಬಜೆಟ್ ಶೀಘ್ರ ಮಂಡನೆಯಾಗಲಿದ್ದು, ಬಜೆಟ್ನಲ್ಲಿ ಸಾರಿಗೆ ನೌಕರರ ಆರನೇ ವೇತನ ಆಯೋಗ ಜಾರಿಯಾಗಬೇಕು ಎನ್ನುವ ಬೇಡಿಕೆ ಇಟ್ಟಿದ್ದಾರೆ.
ಇಂದು ಸಾರಿಗೆ ನೌಕರರು ಮೌರ್ಯ ಸರ್ಕಲ್ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ. ಗೌರವಧನ ಹೆಚ್ಚಳ, ಉಚಿತ ವೈದ್ಯಕೀಯ ಸೌಲಭ್ಯ, ಎಲ್ಕೆಜಿ. ಯುಕೆಜಿಯನ್ನು ಅಂಗನವಾಡಿಯಲ್ಲೇ ಆರಂಭಿಸಬೇಕು. ಪಿಂಚಣಿ ಸೌಲಭ್ಯ ಸೇರಿ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ಇಂದು ಬೆಳಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ.