ವಿಶ್ವಕಪ್ ಮುನ್ನವೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಅಲೆಕ್ಸ್‌ ಹೇಲ್ಸ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ಟೋಬರ್ 05 ರಿಂದ ಏಕದಿನ ವಿಶ್ವಕಪ್ ಟೂರ್ನಿಯು ಆರಂಭಗೊಳ್ಳಲಿದ್ದು, ಇದರ ಮುನ್ನವೇ ಹಾಲಿ ಚಾಂಪಿಯನ್‌ ಇಂಗ್ಲೆಂಡ್ ತಂಡದ ಸ್ಪೋಟಕ ಆರಂಭಿಕ ಬ್ಯಾಟರ್‌ ಅಲೆಕ್ಸ್ ಹೇಲ್ಸ್, ದಿಢೀರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

ಅಲೆಕ್ಸ್‌ ಹೇಲ್ಸ್‌ ಅವರು 34ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ್ದಾರೆ.

ಇಂಗ್ಲೆಂಡ್ 2022ರಲ್ಲಿನ ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಸದಸ್ಯರಾಗಿದ್ದ ಅಲೆಕ್ಸ್ ಹೇಲ್ಸ್, ಕಳೆದ ವರ್ಷದ ನವೆಂಬರ್‌ನಲ್ಲಿ ಪಾಕಿಸ್ತಾನ ವಿರುದ್ದ ಎಂಸಿಜಿ ಮೈದಾನದಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ತಂಡವನ್ನು ಪ್ರತಿನಿಧಿಸಿದ್ದರು.

‘ಲ್ಲಾ ಮಾದರಿಯ ಕ್ರಿಕೆಟ್‌ನಿಂದ ಒಟ್ಟು 156 ಬಾರಿ ನನ್ನ ದೇಶವಾದ ಇಂಗ್ಲೆಂಡ್‌ ತಂಡವನ್ನು ಪ್ರತಿನಿಧಿಸಲು ಅವಕಾಶ ಸಿಕ್ಕಿದ್ದು ನನ್ನ ಪಾಲಿನ ಸೌಭಾಗ್ಯ ಎಂದು ಭಾವಿಸುತ್ತೇನೆ. ಈ ತಂಡದ ಜತೆಗೆ ಸಾಕಷ್ಟು ಅವಿಸ್ಮರಣೀಯ ನೆನಪುಗಳು ನನ್ನ ಜತೆಗಿವೆ. ಈ ಪಯಣದಲ್ಲಿ ಜೀವಮಾನದ ಗೆಳೆಯರು ಸಿಕ್ಕಿದ್ದಾರೆ. ನಿವೃತ್ತಿ ಘೋಷಿಸಲು ಇದು ಸರಿಯಾದ ಸಮಯವೆಂದು ಈ ನಿರ್ಧಾರ ತೆಗೆದುಕೊಂಡಿದ್ದೇನೆ’ ಎಂದು ಹೇಳಿದ್ದಾರೆ.

ಕಳೆದ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಪಾಲಿನ ಲೀಗ್ ಹಂತದ ಕೊನೆಯ ಎರಡು ಪಂದ್ಯಗಳಲ್ಲಿ ನ್ಯೂಜಿಲೆಂಡ್ & ಶ್ರೀಲಂಕಾ ವಿರುದ್ದ ಕ್ರಮವಾಗಿ 52& 47 ರನ್ ಬಾರಿಸಿದ್ದರು. ಇನ್ನು ಭಾರತ ಎದುರಿನ ಸೆಮಿಫೈನಲ್‌ನಲ್ಲಿ ಅಲೆಕ್ಸ್ ಹೇಲ್ಸ್ ಅಜೇಯ 86 ರನ್ ಗಳಿಸಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಲೆಕ್ಸ್ ಹೇಲ್ಸ್‌ ಗುಡ್‌ ಬೈ ಹೇಳಿದ್ದರೂ ಸಹಾ, ತಾವು ಟಿ20 ಲೀಗ್‌ಗಳಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅಲೆಕ್ಸ್ ಹೇಲ್ಸ್, ಪಾಕಿಸ್ತಾನ ಸೂಪರ್ ಲೀಗ್, ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!