ಏಲಿಯನ್‌ಗಳ ದಾಳಿ, ಸೋಲರ್ ಸುನಾಮಿ: ಮತ್ತೊಮ್ಮೆ ಆತಂಕ ಸೃಷ್ಟಿಸಿದ ಬಾಬಾ ವಂಗಾ ಭವಿಷ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕೆಲ ತಿಂಗಳ ಹಿಂದೆಯಷ್ಟೇ ಭಾರತದ ಭವಿಷ್ಯ ನುಡಿದು ಆತಂಕ ಸೃಷ್ಟಿಸಿದ್ದ ಬಲ್ಗೇರಿಯಾದನಾಸ್ಟ್ರಾಡಾಮಸ್‌ ಕುರುಡು ಮಹಿಳೆ ಎಂದೇ ಹೆಸರಾಗಿರುವ ಬಾಬಾ ವಂಗಾ ಭವಿಷ್ಯವಾಣಿ ನುಡಿದಿದ್ದಾರೆ.

ಅವರು ಹೇಳುವಂತೆ , 2023ರಲ್ಲಿ ಅನ್ಯಗ್ರಹ ಜೀವಿಗಳ ದಾಳಿ, ಸೋಲರ್ ಸುನಾಮಿ ಅನೇಕ ಗಂಡಾತರಗಳಿಂದ ವಿಶ್ವ ನಾನಾ ರೀತಿಯ ತೊಂದರೆಗಳನ್ನು ಎದುರಿಸಲಿದೆ .

ಇದೀಗ ವಿಶ್ವದ ಭವಿಷ್ಯ ನುಡಿದು ಮತ್ತೊಮ್ಮೆ ಆತಂಕ ಉಂಟಾಗುವಂತೆ ಮಾಡಿದ್ದಾರೆ.
2023ರಲ್ಲಿ ಸೋಲಾರ್ ಸುನಾಮಿ ಸಂಭವಿಸುತ್ತದೆ. ಇದರ ಪರಿಣಾಮವಾಗಿ ಭೂಮಿಯ ಕಾಂತೀಯ ಕವಚವು ನಾಶವಾಗುತ್ತದೆ. ಭೂಮಿಯ ಮೇಲೆ ಏಲಿಯನ್‌ಗಳ (ಅನ್ಯಗ್ರಹ ಜೀವಿ) ದಾಳಿಯಿಂದ ಲಕ್ಷಾಂತರ ನಿವಾಸಿಗಳು ಸಾಯುತ್ತಾರೆ . ಭೂಮಿಯು ಈಗ ಬ್ರಹ್ಮಾಂಡದಲ್ಲಿ ಅನಿಶ್ಚಿತ ಸಮತೋಲನದಲ್ಲಿ ಉಳಿದಿದೆ. ನಂತರ ಅದು ತನ್ನ ಕಕ್ಷೆಯನ್ನು ಬದಲಿಸುತ್ತದೆ. ಇದರಲ್ಲಿನ ಸಣ್ಣ ಬದಲಾವಣೆಯೂ ಹವಾಮಾನದಲ್ಲಿ ಭಾರೀ ಬದಲಾವಣೆ ಉಂಟುಮಾಡಬಹುದು. ಆಗ ಪರಿಸ್ಥಿತಿ ನಿಜಕ್ಕೂ ಭೀರಕವಾಗಿರುತ್ತದೆ ಎಂದು ಹೇಳಲಾಗಿದೆ.

2023ರ ವೇಳೆಗೆ ಪ್ರಯೋಗಾಲಯಗಳಲ್ಲಿ ಮಾನವರನ್ನು ಉತ್ಪಾದಿಸಲಾಗುತ್ತದೆ (Humans Produce Laboratories). ಹುಟ್ಟದ ಮಗುವಿಗೆ ತಮ್ಮ ಆಯ್ಕೆಯ ಬಣ್ಣ ಮತ್ತು ಗುಣಲಕ್ಷಣಗಳನ್ನು ಆಯ್ಕೆ ಮಾಡುವ ಸಂದರ್ಭ ಬರುತ್ತದೆ. ಈ ಜನನದ ಪ್ರಕ್ರಿಯೆಯು ಮಾನವನ ನಿಯಂತ್ರಣದಲ್ಲಿರುತ್ತದೆ ಮತ್ತು ಬಾಡಿಗೆ ತಾಯ್ತನದ ಸಮಸ್ಯೆಯು ಅದರ ಆವಿಷ್ಕಾರದೊಂದಿಗೆ ಕೊನೆಗೊಳ್ಳುತ್ತದೆ.

ವಿದ್ಯುತ್ ಸ್ಥಾವರದಲ್ಲಿನ ಸ್ಫೋಟವು ವಿಷಕಾರಿ ಮೋಡಗಳ ರಚನೆಗೆ ಕಾರಣವಾಗಬಹುದು. ಇದು ಇಡೀ ಏಷ್ಯಾ ಖಂಡವೇ ಮಂಜು ಕವಿಯುವಂತೆ ಮಾಡುತ್ತದೆ. ಈ ಬದಲಾವಣೆಯಿಂದಾಗಿ ಇತರ ದೇಶಗಳು ಸಹ ಗಂಭೀರ ಕಾಯಿಲೆಗಳಿಂದ ಬಾಧಿಸತೊಡಗುತ್ತವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!