ಆಲಿಘಡ ಮುಸ್ಲಿಮ್ ವಿವಿ ಅಲ್ಪಸಂಖ್ಯಾತರ ವಿಶ್ವವಿದ್ಯಾಲಯವಲ್ಲ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರಕಾರ ಸ್ಪಷ್ಟನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಲಿಘಡ ಮುಸ್ಲಿಮ್ ವಿಶ್ವವಿದ್ಯಾಲಯ ಅಲ್ಪಸಂಖ್ಯಾತರ ವಿಶ್ವವಿದ್ಯಾಲಯವಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ಸ್ಪಷ್ಟಪಡಿಸಿದೆ.

ಅಲಿಘಡ ಮುಸ್ಲಿಮ್ ವಿಶ್ವವಿದ್ಯಾಲಯ ರಾಷ್ಟ್ರೀಯ ವಿದ್ಯಾಲಯವಾಗಿದೆ. ರಾಷ್ಟ್ರೀಯ ಪ್ರಾಮುಖ್ಯತೆ ಹೊಂದಿದೆ ಈ ವಿಶ್ವವಿದ್ಯಾಲಯ ಯಾವತ್ತಿಗೂ ಅಲ್ಪಸಂಖ್ಯಾತರ ವಿಶ್ವವಿದ್ಯಾಲಯವಾಗಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಅಲಿಘಡ ಮುಸ್ಲಿಮ್ ವಿಶ್ವವಿದ್ಯಾಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಅನ್ನೋ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ವಿವರಣೆ ಪಡೆದಿದೆ. ಈ ವೇಳೆ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ಕೆಲ ದಾಖಲೆ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭಗೊಂಡ ಅಲಿಘಡ ಮುಸ್ಲಿಮ್ ಯೂನಿವರ್ಸಿಟಿ, ಅಲ್ಪಸಂಖ್ಯಾತರ ವಿಶ್ವವಿದ್ಯಾಲಯವಾಗಿ ನಡೆದುಕೊಂಡು ಬಂದಿಲ್ಲ.

ವಿಶ್ವವಿದ್ಯಾಲಯದ ಆರಂಭಿಕ ದಿನಗಳಲ್ಲಿ ಆಲಿಘಡ ವಿಶ್ವವಿದ್ಯಾಲಯ ಅಲ್ಪಸಂಖ್ಯಾತರಿಂದ ಆಡಳಿತ ನಡೆಸಲ್ಪಟ್ಟಿದೆಯೋ ಇಲ್ಲವೋ ಅನ್ನೋದು ವಾದವಲ್ಲ. ದೇದ ಸಂವಿಧಾನ, ಜ್ಯಾತ್ಯೀತ ಆಧಾರದಲ್ಲಿ ಶಿಕ್ಷಣ ನೀಡುತ್ತಿದೆ. ರಾಷ್ಟ್ರೀಯ ಸ್ವರೂಪದ ಶಿಕ್ಷಣ ಸಂಸ್ಥೆಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಪ್ರಮೇಯವೇ ಇಲ್ಲ ಎಂದು ತುಷಾರ್ ಮೆಹ್ತ ಹೇಳಿದ್ದಾರೆ.

ಅಲಿಘಡ ಮುಸ್ಲಿಮ್ ವಿಶ್ವವಿದ್ಯಾಲಯವೂ ಅಲ್ಪಸಂಖ್ಯಾತ ವಿಶ್ವವಿದ್ಯಾಲಯವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇಷ್ಟೇ ಅಲ್ಲ ಇದರ ಆಡಳಿತ ಮಂಡಳಿಯನ್ನು ಅಲ್ಪಸಂಖ್ಯಾತ ಸಮುದಾಯ ನಿರ್ವಹಿಸುತ್ತಿಲ್ಲ ಎಂದು ತುಷಾರ್ ಮೆಹ್ತಾ ಹೇಳಿದ್ದಾರೆ. ಹೀಗಾಗಿ ಯಾವುದೇ ಒಂದು ಧರ್ಮ, ಸಮುದಾಯಕ್ಕೆ ಸೇರಿದ ಶಿಕ್ಷಣ ಸಂಸ್ಥೆಯಲ್ಲ ಅನ್ನೋದನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸ್ಪಷ್ಟಪಡಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!