ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಂಗಭದ್ರಾ ಡ್ಯಾಮ್ನ 33 ಕ್ರಸ್ಟ್ ಗೇಟನ್ನೂ ತಕ್ಷಣವೇ ಬದಲಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಮಾತಾಡಿದ ಅವರು ತುಂಗಭದ್ರಾ ಅಣೆಕಟ್ಟಿನ ವಿಚಾರದಲ್ಲಿ ಅಲ್ಲಿನ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆಯನ್ನೂ ಗಮನಿಸಿದ್ದೇನೆ. ಕಳೆದ ಆಗಸ್ಟ್ನಲ್ಲಿ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದಿತ್ತು.
ರೈತರೂ ಆತಂಕದಲ್ಲಿ ಇದ್ದರು. ಸಾವಿರಾರು ಕ್ಯುಸೆಕ್ ನೀರು ಹರಿದು ವ್ಯರ್ಥವಾಗಿದೆ. ಅದಕ್ಕೆ ಖಾಯಂ ಪರಿಹಾರ ನೀಡಿಲ್ಲ. ಇವರು ತಡ ಮಾಡಿದ್ದು, ನೀರಿನ ಒತ್ತಡ ಇತರ ಗೇಟ್ಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಎಲ್ಲ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಬೇಕಾದ ಪರಿಸ್ಥಿತಿ ಒದಗಿಬಂದಿದೆ ಎಂದಿದ್ದಾರೆ.