Wednesday, June 7, 2023

Latest Posts

ಸಚಿವ ಸಂಪುಟದ ಎಲ್ಲ 34 ಸ್ಥಾನ ಭರ್ತಿ, ಆಡಳಿತಕ್ಕೆ ಹೊಸ ರೂಪ ಕೊಡುವ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಸಚಿವ ಸಂಪುಟದ ಎಲ್ಲ 34 ಸ್ಥಾನಗಳನ್ನು ಭರ್ತಿ ಮಾಡಲಾಗಿದ್ದು, ಆಡಳಿತಕ್ಕೆ ಹೊಸ ರೂಪ ಕೊಡುವ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಶನಿವಾರ ವಿಧಾನಸೌಧದಲ್ಲಿ ಸಚಿವ ಸಂಪುಟದ ಅನೌಪಚಾರಿಕ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚಿಸಲಾಗಿದೆ. ಮುಖ್ಯಮಂತ್ರಿ ಹೊರತುಪಡಿಸಿ, 33 ಸ್ಥಾನಗಳನ್ನೂ ಭರ್ತಿ ಮಾಡಲಾಗಿದೆ ಎಂದು ತಿಳಿಸಿದರು.
ಸರ್ಕಾರ ನಾವು ಕೊಟ್ಟಿರುವ ಭರವಸೆ ಈಡೇರಿಸಬೇಕು. ಜನ ಹೊಸ ಬದಲಾವಣೆ ಬಯಸಿದ್ದಾರೆ. ಅದರಿಂದ ಆಡಳಿತಕ್ಕೆ ಹೊಸ ರೂಪ ಕೊಡುವ ದೃಷ್ಟಿಯಿಂದ ಈ ಸಚಿವರ ಸಂಪುಟ ರಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಚಿವ ಸಂಪುಟವು ಹೊಸ ಹಾಗೂ ಹಳೆ ಮುಖಗಳ ಸಮ್ಮಿಶ್ರಣವಾಗಿದೆ. ಮೊದಲ ಬಾರಿ ಗೆದ್ದವರನ್ನು ಮಂತ್ರಿ ಮಾಡಿಲ್ಲ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!