ಹೊಸದಿಗಂತ ವರದಿ ಕೊಪ್ಪಳ:
ಭಾನುವಾರ ಅಹಮದಾಬಾದ್‌ನಲ್ಲಿ ನಡೆಯಲಿರುವ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ, ಫೈನಲ್ ಪಂದ್ಯವನ್ನು ದೊಡ್ಡ ಪರದೆಯ ಮೇಲೆ ವೀಕ್ಷಿಸಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವುದು ಇಲ್ಲಿನ ಕ್ರಿಕೆಟ್ ಪ್ರೇಮಿಗಳ ಖುಷಿಗೆ ಕಾರಣವಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ದೊಡ್ಡ ಎಲ್‌ಇಡಿ ಸ್ಕ್ರೀನ್ ಹಾಗೂ ಸೌಂಡ್ ವ್ಯವಸ್ಥೆ ಮಾಡಿಕೊಂಡಿದೆ.