ಎಲ್ಲರೂ ಬಿಜೆಪಿ ಸದಸ್ಯರಾಗಿ: ಕರೆ ಕೊಟ್ಟ ಬಿ.ವೈ. ರಾಘವೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪ್ರಸಕ್ತ 2024ರ ಸಾಲಿನ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ  ಅವರು ಸೋಮವಾರ ಚಾಲನೆ ನೀಡಿದ್ದಾರೆ.

ಇದೀಗ ಇಡೀ ದೇಶದಲ್ಲಿ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಜನರನ್ನು ತಮ್ಮ ಪಕ್ಷದ ಸದಸ್ಯರನ್ನಾಗಿ ಮಾಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಯುವ ಜನತೆ ಬಿಜೆಪಿ ಸದಸ್ಯತ್ವ ಪಡೆಯಲು ಕರೆ ನೀಡಿದ್ದಾರೆ.

ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದು ಅವರ ನಾಯಕತ್ವದಲ್ಲಿ ದೇಶವು ಜಗತ್ ಒಂದೇ ಭಾರತ್ ಧ್ಯೇಯದೊಂದಿಗೆ ಸಾಗುತ್ತಿದ್ದು ಎಲ್ಲರೂ 8800002024 ನಂಬರ್ ಗೆ ಮಿಸ್ಡ್ ಕಾಲ್ ನೀಡಿ, ಈ ಕೆಳಗಿನ ಲಿಂಕ್ ಬಳಸಿ ಬಿಜೆಪಿ ಸದಸ್ಯರಾಗಿ ಎಂದು ಮನವಿ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿ.ವೈ.ವಿಜಯೇಂದ್ರ ಅವರು ವಿಡಿಯೋ ಹಂಚಿಕೊಂಡಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!