ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆ ಕೋವಿಡ್ ನಿಯಮಗಳನ್ನು ಸಂಪೂರ್ಣ ಹಿಂಪಡೆಯಲು ಬ್ರಿಟನ್ ಸರ್ಕಾರ ಮುಂದಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಬೋರಿಸ್ ಜಾನ್ಸನ್, ಜುಲೈ 19ರಿಂದ ಬ್ರಿಟನ್ ನಲ್ಲಿ ಕೊರೋನಾ ನಿಯಮಾವಳಿಗಳು ಕೊನೆಗೊಳ್ಳಲಿದ್ದು, ಅಂದಿನಿಂದ ಮಾಸ್ಕ್, ಸಾಮಾಜಿಕ ಅಂತರ ಹಾಗೂ ವರ್ಕ್ ಫ್ರಂ ಹೋಂ ನಿಯಮಗಳನ್ನು ತೆಗೆದುಹಾಕಲಾಗುತ್ತದೆ ಎಂದರು.
ಕೊರೋನಾ ಸೋಂಕಿನಿಂದ ಬಳಲುತ್ತಿರುವವರಿಗೆ ಲಸಿಕೆ ಹೆಚ್ಚು ಪರಿಣಾಮಕಾರಿಯಾಗಲಿದೆ. ಕೊರೋನಾದಿಂದ ಸಾವು ನೋವು ಸಂಭವಿಸಿದರು ಅದು ಈ ಹಿಂದಿನ ಅಲೆಗಳಿಗಿಂತ ಕಡಿಮೆ ಇರಲಿದೆ ಎಂದರು.
ಕೊರೋನಾ ಸೋಂಕು ಇನ್ನು ಮುಗಿದಿಲ್ಲ, ಎಲ್ಲರೂ ಎಚ್ಚರಿಕೆಯಿಂದಿರಬೇಕು ಎಂದು ತಿಳಿಸಿದರು.