Sunday, June 4, 2023

Latest Posts

ದೆಹಲಿಯಲ್ಲಿ ದಿನವಿಡೀ ಹೈಡ್ರಾಮಾ, ರಾತ್ರಿಯಿಡೀ ಸಭೆ! ಮಿಡ್‌ನೈಟ್ ಮಾತುಕತೆಯಲ್ಲಿ ಏನೇನಾಯ್ತು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ನಿನ್ನೆಯಿಡೀ ಹೈಡ್ರಾಮಾ ನಡೆದರೂ ಸಿಎಂ ಯಾರು ಅನ್ನೋ ವಿಷಯ ಮಾತ್ರ ಕಗ್ಗಂಟಾಗಿಯೇ ಉಳಿದಿದೆ. ನಿನ್ನೆ ಮಧ್ಯರಾತ್ರಿ ಸಿದ್ದರಾಮಯ್ಯ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಹಾಗೂ ಕೆ.ಸಿ. ವೇಣುಗೋಪಾಲ್ ಸಭೆ ನಡೆಸಿದ್ದರು.

ಇದಾದ ನಂತರ ಡಿಕೆಶಿ ಜೊತೆ ಸುರ್ಜೇವಾಲಾ ಮೀಟಿಂಗ್ ನಡೆಸಿದ್ದು, ನಂತರ ಖರ್ಗೆ ನಿವಾಸಕ್ಕೆ ಬಂದಿದ್ದರು. ಈ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಕೂಡ ಭಾಗಿಯಾಗಿದ್ದರು.

ಈ ಸಭೆಯಲ್ಲಿ ಡಿಕೆಶಿ ಮನವೊಲಿಸಲಾಗಿದೆ ಎನ್ನುವ ಸುದ್ದಿ ಹರಿದಾಡಿದೆ, ಚರ್ಚೆ ಬಳಿಕ ಡಿಕೆಶಿ ತಮ್ಮ ಸಹೋದರ ಡಿ.ಕೆ. ಸುರೇಶ್ ನಿವಾಸಕ್ಕೆ ತೆರಳಿದ್ದು, ಅಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಇಂದು ಸಂಜೆ ಬೆಂಗಳೂರಿನಲ್ಲಿ ಶಾಸಕಾಂಗ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಘೋಷಣೆ ಮಾಡುವ ಸಾಧ್ಯತೆಗಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!