ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ ದಿನವನ್ನು ಆಚರಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವಕ್ಕೆ ಧರಿಸಿರುವ ಪೇಟ ವಿಭಿನ್ನವಾಗಿದೆ. ಇದ್ಯಾವ ಪೇಟ? ನೋಡಿ..
ಪ್ರತಿ ವರ್ಷವೂ ವೇಷಭೂಷಣಗಳಿಂದಲೇ ಗಮನ ಸೆಳೆಯುವ ನಮೋ, ಗುರುವಾರ ಕೆಂಪು ಕೋಟೆಯಲ್ಲಿ ರಾಜಸ್ಥಾನಿ ಲೆಹರಿಯಾ ಪ್ರಿಂಟ್ ಪೇಟಾ ಧರಿಸಿ ಗಮನ ಸೆಳೆದರು.ಕಿತ್ತಳೆ, ಹಳದಿ ಮತ್ತು ಹಸಿರು ಬಣ್ಣಗಳ ಮಿಶ್ರಣದಿಂದ ಕೂಡಿದ ಪೇಟ ಧರಿಸಿದ್ದರು. ಇದರೊಂದಿಗೆ ಬಿಳಿ ಕುರ್ತಾ, ತಿಳಿ ನೀಲಿ ಬಣ್ಣದ ಬಂಧಗಾಲಾ ಜಾಕೆಟ್ ಹೆಚ್ಚು ಗಮನ ಸೆಳೆಯಿತು.