ಕರೆನ್ಸಿ ನೋಟುಗಳ ಮೇಲೆ ನೇತಾಜಿ ಫೋಟೋ ಮುದ್ರಿಸುವಂತೆ ಬೇಡಿಕೆಯಿಟ್ಟ ಅಖಿಲ ಭಾರತ ಹಿಂದೂಮಹಾಸಭಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತದ ಕರೆನ್ಸಿ ನೋಟುಗಳ ಮೇಲೆ ಮಹಾತ್ಮಾ ಗಾಂಧಿಯವರ ಫೋಟೋಗೆ ಬದಲಾಗಿ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಫೋಟೋವನ್ನು ಮುದ್ರಿಸುವಂತೆ ಅಖಿಲ ಭಾರತ ಹಿಂದೂ ಮಹಾಸಭಾ ಬೇಡಿಕೆಯಿಟ್ಟಿದೆ ಎಂದು ಮೂಲಗಳು ವರದಿ ಮಾಡಿವೆ.

“ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೇತಾಜಿಯವರ ಕೊಡುಗೆಯು ಮಹಾತ್ಮ ಗಾಂಧಿಯವರಿಗಿಂತ ಕಡಿಮೆಯಿಲ್ಲ ಎಂದು ನಾವು ಭಾವಿಸುತ್ತೇವೆ. ಆದ್ದರಿಂದ ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಅವರನ್ನು ಗೌರವಿಸಲು ಉತ್ತಮ ಮಾರ್ಗವೆಂದರೆ ಅವರ ಚಿತ್ರವನ್ನು ಕರೆನ್ಸಿ ನೋಟುಗಳಲ್ಲಿ ಇಡುವುದು. ಗಾಂಧಿಯವರ ಫೋಟೋವನ್ನು ನೇತಾಜಿಯವರೊಂದಿಗೆ ಬದಲಾಯಿಸಬೇಕು” ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ಪಶ್ಚಿಮ ಬಂಗಾಳದ ಕಾರ್ಯಾಧ್ಯಕ್ಷ ಚಂದ್ರಚೂರ್ ಗೋಸ್ವಾಮಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ನಡೆಯಲಿರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹಿಂದೂ ಮಹಾಸಭಾ ಘೋಷಿಸಿದೆ. ಹಿಂದೂ ಬಂಗಾಳಿಗಳ ಹಕ್ಕುಗಳನ್ನು ರಕ್ಷಿಸಲು ಟಿಎಂಸಿ ಅಥವಾ ಬಿಜೆಪಿಗೆ ಸಾಧ್ಯವಾಗಿಲ್ಲ. ಅವರ ಹಕ್ಕುಗಳನ್ನು ರಕ್ಷಿಸಲು ನಾವು ಹೋರಾಡುತ್ತೇವೆ. ಕೆಲವು ಬಿಜೆಪಿ ನಾಯಕರ ಬಂಗಾಳ ವಿಭಜನೆಯ ಬೇಡಿಕೆಯನ್ನು ನಾವು ಸಹ ಬೆಂಬಲಿಸುವುದಿಲ್ಲ. ನಾವು ರಾಜ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಬಯಸುತ್ತೇವೆ” ಎಂದು ಗೋಸ್ವಾಮಿ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!