ಆಂಧ್ರ ಸಿಎಂ ಜಗನ್​ ಸಂಪುಟದ ಎಲ್ಲ ಸಚಿವರು ರಾಜೀನಾಮೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರದ ಎಲ್ಲ 24 ಸಚಿವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎಲ್ಲ ಮಂತ್ರಿಗಳು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಕೆ ಮಾಡಿದ್ದು, ರಾಜ್ಯಪಾಲರಿಗೆ ಅವುಗಳನ್ನು ರವಾನೆ ಮಾಡುವ ಸಾಧ್ಯತೆ ಇದೆ.
ಇನ್ನು ನೂತನವಾಗಿ ಸಚಿವ ಸಂಪುಟ ಪುನರ್​ ರಚನೆ ಮಾಡುವ ಉದ್ದೇಶದಿಂದ ಎಲ್ಲ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಏಪ್ರಿಲ್​ 11ರಂದು ಹೊಸ ಸಚಿವರು ಜಗನ್ ಸಂಪುಟ ಸೇರ್ಪಡೆಗೊಳ್ಳಲಿದ್ದಾರೆ.
ಆದರೆ ಈಗಾಗಲೇ ಜಗನ್​ ಸಂಪುಟದಲ್ಲಿರುವ ಕೇವಲ ನಾಲ್ವರು ಮರಳಿ ಮಂತ್ರಿಸ್ಥಾನ ಪಡೆದುಕೊಳ್ಳಲಿದ್ದು, ಉಳಿದಂತೆ ಎಲ್ಲ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ದಟ್ಟವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!