April 26, 2026
Sunday, April 26, 2026
spot_img

ರಾಹುಲ್‌ ಗಾಂಧಿ ಆರೋಪಗಳೆಲ್ಲವೂ ನೂರಕ್ಕೆ ನೂರರಷ್ಟು ಸತ್ಯ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆಳಂದ ಕ್ಷೇತ್ರದ ಮತ ಅಕ್ರಮದ ಬಗ್ಗೆ ಸಿಐಡಿ ತನಿಖೆಗೆ ಚುನಾವಣಾ ಆಯೋಗ ಸಹಕಾರ ನೀಡದಿರುವುದನ್ನು ನೋಡಿದರೆ, ಅವರೂ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆಂಬ ಅನುಮಾನ ಸಹಜವಾಗಿ ಮೂಡುತ್ತದೆಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಈ ಬಗ್ಗೆ ನಮ್ಮ ಬಳಿ ಸಂಪೂರ್ಣ ಮಾಹಿತಿ ಪಡೆದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಕೇವಲ ಆಳಂದ ವಿಧಾನಸಭಾ ಕ್ಷೇತ್ರ ಮಾತ್ರವಲ್ಲ, ಬೇರೆ ಕ್ಷೇತ್ರಗಳಲ್ಲೂ ಈ ರೀತಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದರು.

ಸುಮಾರು 6 ಸಾವಿರ ಮತಗಳನ್ನು ತೆಗೆದು ಹಾಕಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹಾಗೂ ಆಳಂದ ಶಾಸಕರು ದೂರು ನೀಡಿದ್ದರು. ಈ ಕುರಿತು ಪ್ರಕರಣವೂ ದಾಖಲಾಯಿತು. ಈ ಮಧ್ಯೆ ಚಿಲುಮೆ ಸಂಸ್ಥೆ ಅಕ್ರಮದ ವಿಚಾರವಾಗಿ ನಾವು ಹೋರಾಟ ಮಾಡಿ ಕೇಂದ್ರ ಚುನಾವಣಾ ಆಯೋಗವನ್ನು ಭೇಟಿ ಮಾಡಿದ್ದೆವು. ಆಳಂದ ಕ್ಷೇತ್ರದ ಪ್ರಕರಣದ ಬಗ್ಗೆ ಸಿಐಡಿ ತನಿಖೆ ಆರಂಭಿಸಿ ಚುನಾವಣಾ ಆಯೋಗದಿಂದ ಮಾಹಿತಿ ಕೇಳಿತ್ತು. ಆದರೆ ಆಯೋಗವು ತನಿಖೆಗೆ ಸಹಕಾರ ನೀಡಲಿಲ್ಲ ಎಂದು ತಿಳಿಸಿದರು.


Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !