ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಹುಬ್ಬಳ್ಳಿ:
ಪಕ್ಷದಲ್ಲಿ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಈ ಬಾರಿಯೂ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗೂಡಿ ಅಭ್ಯರ್ಥಿಗಳನ್ನು ಗೆಲಿಸುವಲ್ಲಿ ಶ್ರಮಿಸಲಾಗುವುದು. ಈ ಬಾರಿಯೂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.
ಇಲ್ಲಿಯ ದೇಶಪಾಂಡೆ ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಪ್ರಧಾನಿಯವರ ನೇತೃತ್ವದಲ್ಲಿ ಜನರಿಗೆ ಕೊರೋನಾ ಸಂದರ್ಭದಲ್ಲಿ ಆಕ್ಸಿಜನ್ ಕಿಟ್, ಬೆಡ್ ಒದಗಿಸುವುದು ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಯಾವುದೇ ಪಕ್ಷ ನೋಡದೇ ಎಲ್ಲರಿಗೂ ಸರ್ಕಾರದ ಯೋಜನೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಿದ್ದೇವೆ. ಜನರಿಗೆ ಬಿಜೆಪಿ ಪಕ್ಷದ ನಂಬಿಕೆ ಇದೆ. ಅವರು ಪಾಲಿಕೆ ಚುನಾವಣೆಯಲ್ಲಿ ಆರ್ಶೀವಾದ ಮಾಡಲಿದ್ದಾರೆ ಎಂದರು.
ಇನ್ನು ಹು-ಧಾ ಮಹಾನಗರ ಅಭಿವೃದ್ಧಿಯ ಪಕ್ಷದ ಪ್ರಣಾಳಿಕೆ ತಯಾರಿಸಲಾಗುತ್ತಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದರು.
ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಬಸವರಾಜ್ ಕುಂದಗೋಳಮಠ, ಎಮ್. ಆರ್.ಪಾಟೀಲ್ ಗಣ್ಯರು ಸೇರಿದಂತೆ ಕಾರ್ಯಕರ್ತರು ಮುಂತಾದವರು ಇದ್ದರು.