ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾವು, ನೀವೆಲ್ಲ ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದೂ ಜನರ ತೆರಿಗೆ ಹಣದಿಂದಲೇ. ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೇ ಅಂತಹ ಅಧಿಕಾರಿಗಳ ವಿರುದ್ಧ ನಿಷ್ಠೂರವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಓಗಳಿಗೆ ಸಿಎಂ ಸಿದ್ದು ಎಚ್ಚರಿಕೆ ನೀಡಿದ್ದಾರೆ.
ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳೇ ನೇರಹೊಣೆಯಾಗುತ್ತಾರೆ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.