Saturday, July 2, 2022

Latest Posts

ರಾಜ್ಯದ ಎಲ್ಲಾ ಸರ್ಕಾರಿ ಜಿಲ್ಲಾಸ್ಪತ್ರೆಗಳ ಐಸಿಯುಗಳಲ್ಲಿ ಸಿಸಿಟಿವಿ: ಆರೋಗ್ಯ ಸಚಿವ ಡಾ.ಸುಧಾಕರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಶಿವಮೊಗ್ಗ:

ರಾಜ್ಯದ ಎಲ್ಲಾ ಸರ್ಕಾರಿ ಜಿಲ್ಲಾಸ್ಪತ್ರೆಗಳ ಐಸಿಯುಗಳಲ್ಲಿ ಸಿಸಿಟಿವಿ ಗಳನ್ನು ಅಳವಡಿಸಲಾಗುವುದು. ಜೊತೆಗೆ ಡಾಕ್ಟರ್‌ಗಳಿಗೆ ಜಿಯೋ ಫೆನ್ಸಿಂಗ್ ಅಳವಡಿಕೆ ಬಗ್ಗೆ ಯೋಜಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದರು.
ನಗರದ ಮೆಗ್ಗಾನ್ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ವೈದ್ಯರುಗಳು ಕೆಲಸಕ್ಕೆ ಹಾಜರಾದ ಬಳಿಕ ತಮ್ಮದೇ ಕೆಲಸಗಳಿಗೆ ತೆರಳುವ ಬಗ್ಗೆ ಸಾಕಷ್ಟು ಆರೋಪಗಳಿವೆ. ಬಯೋಮೆಟ್ರಿಕ್ ವ್ಯವಸ್ಥೆ ಇದ್ದರೂ ಯಂತ್ರದಲ್ಲಿ ತಮ್ಮ ಬೆರಳಚ್ಚನ್ನು ನಮೂದಿಸಿದ ಬಳಿಕ ತೆರಳುತ್ತಿದ್ದಾರೆ ಎಂಬ ದೂರುಗಳಿವೆ. ಇದಕ್ಕೆ ಕಡಿವಾಣ ಹಾಕಲು ಜಿಯೋ ಫೆನ್ಸಿಂಗ್ ವ್ಯವಸ್ಥೆ ಜಾರಿಗೆ ತರಲು ಚರ್ಚಿಸಲಾಗುತ್ತಿದೆ. ಇದರಿಂದ 100 ಮೀಟರ್ ವ್ಯಾಪ್ತಿಯಲ್ಲಿ ಓಡಾಡುವುದು ಪತ್ತೆಯಾಗುತ್ತದೆ. 100 ಮೀಟರ್ ಪ್ರದೇಶದಿಂದ ಹೊರಹೋದರೂ ಗೊತ್ತಾಗುತ್ತದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss