Wednesday, June 29, 2022

Latest Posts

ಉತ್ತರ ಪ್ರದೇಶದಲ್ಲಿ ಎಲ್ಲ ಪಕ್ಷಗಳೂ ಚುನಾವಣೆ ಬಯಸಿವೆ- ಕೇಂದ್ರ ಚುನಾವಣಾ ಆಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಒಮಿಕ್ರಾನ್ ಹಾಗೂ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಮುಂದೂಡುವುದನ್ನು ಪರಿಗಣಿಸಬೇಕು ಎಂಬ ಅಲಹಾಬಾದ್ ಹೈ ಕೋರ್ಟ್ ಸಲಹೆಗೆ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದೆ.

ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕೋವಿಡ್-19 ನಿಯಮಗಳನ್ನು ಅನುಸರಿಸಿ ಸರಿಯಾದ ಸಮಯಕ್ಕೆ ವಿಧಾನಸಭೆ ಚುನಾವಣೆ ನಡೆಸಬೇಕು ಎಂದು ಹೇಳಿರುವುದಾಗಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.

ಉತ್ತರ ಪ್ರದೇಶದ ರಾಜಕೀಯ ಪಕ್ಷಗಳು ಚುನಾವಣಾ ಸಮಿತಿಯನ್ನು ಭೇಟಿ ಮಾಡಿ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸುವಂತೆ ಒತ್ತಾಯಿಸಿರುವುದಾಗಿ ಹೇಳಿದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ, ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಭಾರತೀಯ ಚುನಾವಣಾ ಆಯೋಗದ ನಿಯೋಗ ಉತ್ತರ ಪ್ರದೇಶಕ್ಕೆ ಭೇಟಿ ನೀಡುತ್ತಿದೆ.

ಜನವರಿ 5  ರಂದು ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಮತದಾನದ ದಿನಾಂಕದಂದು ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ ಎಂದಿದ್ದಾರೆ. ಎಲ್ಲಾ ಮತಗಟ್ಟೆಗಳಲ್ಲಿ ವಿವಿಪ್ಯಾಟ್‌ಗಳನ್ನು ಅಳವಡಿಸಲಾಗುವುದು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಸುಮಾರು ಒಂದು ಲಕ್ಷ ಮತಗಟ್ಟೆಗಳಲ್ಲಿ ಲೈವ್ ವೆಬ್‌ಕಾಸ್ಟಿಂಗ್ ಸೌಲಭ್ಯ ಕೂಡ ಇದೆ ಎಂದಿದ್ದಾರೆ.

80 ವರ್ಷಕ್ಕಿಂತ ಮೇಲ್ಪಟ್ಟವರು, ದಿವ್ಯಾಂಗರು ಹಾಗೂ ಕೋವಿಡ್ ಸೋಂಕಿತರು ಮತಗಟ್ಟೆಗಳಿಗೆ ಬರಲು ಸಾಧ್ಯವಾಗದಿದ್ದರೆ, ಚುನಾವಣಾ ಆಯೋಗ ಅವರ ಮನೆ ಬಾಗಿಲಿಗೆ ತಲುಪಲಿದೆ ಎಂದಿದ್ದಾರೆ. ರಾಜಕೀಯ ಪಕ್ಷಗಳು ನಮ್ಮ ಮುಂದಿಟ್ಟ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಿದ್ದೇವೆ. ಯಾವುದೇ ಮತದಾರನಿಗೆ ಮತದಾನದ ಹಕ್ಕು ತಪ್ಪದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss