ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಂಸತ್ತಿನಲ್ಲಿ ಸರ್ವಪಕ್ಷ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ ಮಂಗಳವಾರ ಸಂಸತ್ ಲೈಬ್ರರಿ ಕಟ್ಟಡದಲ್ಲಿ ಆರಂಭವಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಡಿಎಂಕೆ ಸಂಸದ ಟಿಆರ್ ಬಾಲು, ಹರ್‌ಸಿಮ್ರತ್ ಕೌರ್ ಬಾದಲ್ (ಎಸ್‌ಎಡಿ), ಮತ್ತು ಅಧೀರ್ ರಂಜನ್ ಚೌಧರಿ (ಕಾಂಗ್ರೆಸ್) ಸೇರಿದಂತೆ ಹಲವಾರು ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಚಳಿಗಾಲದ ಅಧಿವೇಶನವು ಡಿಸೆಂಬರ್ 7 ರಂದು ಪ್ರಾರಂಭವಾಗಲಿದ್ದು, ಡಿಸೆಂಬರ್ 29 ರವರೆಗೆ ನಡೆಯಲಿದೆ. ಗುಜರಾತ್ ಚುನಾವಣಾ ವೇಳಾಪಟ್ಟಿಯಿಂದಾಗಿ ಅಧಿವೇಶನವನ್ನು ಒಂದು ತಿಂಗಳು ವಿಳಂಬಗೊಳಿಸಬೇಕಾಯಿತು. ಬುಧವಾರದಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ರಾಜ್ಯಸಭಾ ಸಚಿವಾಲಯವು ತನ್ನ ಸದಸ್ಯರಿಗೆ ನೀತಿ ಸಂಹಿತೆಯನ್ನು ಬಿಡುಗಡೆ ಮಾಡಿದೆ.

ಚಳಿಗಾಲದ ಅಧಿವೇಶನವು ಡಿಸೆಂಬರ್ 29 ರವರೆಗೆ ಅಂದರೆ ಒಟ್ಟು 17 ಕೆಲಸದ ದಿನಗಳು ಇರುತ್ತವೆ. ಮೊದಲ ದಿನ ಅಂತರ್‌ ಅಧಿವೇಶನದ ಅವಧಿಯಲ್ಲಿ ನಿಧನರಾದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಿದೆ. ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ರಾಜ್ಯಸಭೆಯ ಅಧ್ಯಕ್ಷರಾಗಿರುವ ಮೊದಲ ಅಧಿವೇಶನ ಇದಾಗಿದೆ.

ಡಿಸೆಂಬರ್ 7 ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನ ಕೇಂದ್ರ ಸರ್ಕಾರದ ಕಾರ್ಯಸೂಚಿಯ 16 ಹೊಸ ಮಸೂದೆಗಳನ್ನು ಒಳಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!