ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಅಫ್ಘಾನಿಸ್ಥಾನದ ಬಿಕ್ಕಟ್ಟಿನ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಕೇಂದ್ರ ಸರ್ಕಾರ ಇಂದು ಸರ್ವ ಪಕ್ಷ ಸಭೆ ಕರೆದಿದೆ.
ಬೆಳಗ್ಗೆ 11 ಗಂಟೆಗೆ ಅಫ್ಘಾನಿಸ್ಥಾನದ ಪರಿಸ್ಥಿತಿ ಬಗ್ಗ ಎಲ್ಲಾ ಪಕ್ಷದ ನಾಯಕರಿಗೆ ಮಾಹಿತಿ ನೀಡಲು ಈ ಸಭೆ ನಡೆಯಲಿದ್ದು, ಅಫ್ಘಾನಿಸ್ತಾನ ಅಲ್ಪಸಂಖ್ಯಾತರಾದ ಹಿಂದು ಮತ್ತು ಸಿಖ್ರಿಗೆ ಆಶ್ರಯ ನೀಡುವುದಾಗಿ ಮತ್ತು ಅಫ್ಘಾನಿಸ್ತಾನದ ಜನರಿಗೆ ನೆರವು ನೀಡುವುದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ.
ಈಗಾಗಲೇ ತಾಲಿಬಾನ್ ಉಗ್ರರು ಅಫ್ಘಾನಿಸ್ಥಾನವನ್ನು ವಶಪಡಿಸಿಕೊಂಡಿದ್ದು, ಸಾವಿರಾರು ಅಫ್ಘಾನಿಸ್ಥಾನಿಗಳು ಅಮೆರಿಕ, ಭಾರತ ಸೇರಿದಂತೆ ಇತರೆ ರಾಷ್ಟ್ರಗಳಿಗೆ ಸ್ಥಳಾಂತರಗೊಂಡಿದ್ದಾರೆ.