ಕಾಶ್ಮೀರಿ ಪಂಡಿತರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಸರ್ಕಾರ ನಿರ್ಧಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು-ಕಾಶ್ಮೀರದ ಕೆಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭಯೋತ್ಪಾದಕ ಗುಂಪುಗಳು ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ದಾಳಿ ಮಾಡುತ್ತಿವೆ. ಭಯಭೀತರಾಗಿರುವ ಜನರ ರಕ್ಷಣೆಗೆ ಸರ್ಕಾರ ನಿಂತಿದ್ದು, ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ನಿರ್ಧಾರ ಮಾಡಿದೆ. ಕಳೆದ 20 ದಿನಗಳಲ್ಲಿ ಭಯೋತ್ಪಾದಕರಿಂದ ಮೂರು ಹಿಂಸಾತ್ಮಕ ಕೃತ್ಯಗಳು ನಡೆದಿವೆ. ಸರಣಿ ಭಯೋತ್ಪಾದಕರ ದಾಳಿಯಿಂದ ಕಾಶ್ಮೀರ ಕಣಿವೆಯಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದೆ. ಪ್ರಧಾನಮಂತ್ರಿ ಪುನರ್ವಸತಿ ಪ್ಯಾಕೇಜ್ (ಪಿಎಂಆರ್‌ಪಿ) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಶ್ಮೀರಿ ಪಂಡಿತರು, ಕೇಂದ್ರ ಸರ್ಕಾರ ತಮಗೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಜನರ ಆತಂಕ ದೂರ ಮಾಡುವ ಉದ್ದೇಶದಿಂದ ಮುಂದಿನ ಸೋಮವಾರದೊಳಗೆ (ಜೂನ್ 6) ಪಿಎಂ ಪ್ಯಾಕೇಜ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಶ್ಮೀರಿ ಪಂಡಿತ ನೌಕರರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಬುಧವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಾಶ್ಮೀರದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಒಟ್ಟು 4,500 ನಿರಾಶ್ರಿತರ ಸಮುದಾಯದ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಈಗಾಗಲೇ 100 ಮಂದಿ ದಂಪತಿ ಸೇರಿದಂತೆ 500ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ಅಲ್ಲಿನ ಕೆಲವು ಪಂಡಿತರು ಸರ್ಕಾರದ ಈ ಕ್ರಮವನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ ಕಣಿವೆಯ ಸುತ್ತಲಿನ ಪರಿಸ್ಥಿತಿ ಸುಧಾರಿಸುವವರೆಗೆ ನಾವು ಇಲ್ಲಿಂದ ಕದಲುವುದಿಲ್ಲ ಪಟ್ಟು ಹಿಡಿದಿದ್ದಾರೆ.

ಮಂಗಳವಾರ (ಮೇ 31) ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಪಂಡಿತ್ ಕುಟುಂಬಕ್ಕೆ ಸೇರಿದ ಶಿಕ್ಷಕಿ ರಜನಿ ಬಾಲಾ ಅವರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಹಿಂದೆ ರಾಹುಲ್ ಭಟ್ ಎಂಬ ಸರ್ಕಾರಿ ಉದ್ಯೋಗಿ. ಅಮ್ರೀನ್ ಭಟ್ ಎಂಬ ಕಿರುತೆರೆ ನಟಿಯನ್ನು ಉಗ್ರರು ಹತ್ಯೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!