ಎಲ್ಲಾ ಪೋಲೀಸ್ ಅಧಿಕಾರಿ, ಸಿಬ್ಬಂದಿಗಳು ‘ಹೆಲ್ಮೆಟ್’ ಧರಿಸುವುದು ಕಡ್ಡಾಯ: ರಾಜ್ಯ ಸರಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರಾಜ್ಯದ ಎಲ್ಲಾ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹೆಲ್ಮೆಟ್ ಧರಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು, ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸದೇ, ರಸ್ತೆ ಅಪಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿ , ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಮತ್ತು ಕೆಲವರು ಮೃತಪಟ್ಟಿರುವ ಘಟನಗಳು ಸಂಭವಿಸಿರುವುದು ಕಂಡು ಬಂದಿರುತ್ತದೆ.

ಹೀಗಾಗಿ ರಾಜ್ಯಾದ್ಯಂತ ಎಲ್ಲಾ ಘಟಕಗಳಲ್ಲಿ (ಬೆಂಗಳೂರು ನಗರ ಒಳಗೊಂಡಂತೆ) ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಕಲಂ 129(ಎ) & (ಬಿ) ರಲ್ಲಿ ನಮೂದಿಸಿರುವಂತೆ ಹಾಗೂ ಸೂಚಿಸಿರುವಂತೆ ಕಡ್ಡಾಯವಾಗಿ ಸುರಕ್ಷಿತ ಹೆಲ್ಮೆಟ್ ಅನ್ನು ಧರಿಸಿ, ಸದರಿ ಹೆಲ್ಮೆಟ್ ಅನ್ನು ಭದ್ರವಾಗಿ ಕಟ್ಟಿಕೊಳ್ಳಬೇಕು (to strap the helmet) ಎಂದು ತಿಳಿಸಿದ್ದಾರೆ.

ಮೋಟಾರು ವಾಹನ ಕಾಯ್ದೆಯ ಕಲಂ 129 (ಎ) & (ಬಿ) ರಡಿಯಲ್ಲಿ ಹೆಲ್ಮಟ್ ನ ನಿರ್ದಿಷ್ಟತೆಯ ಬಗ್ಗೆ ವಿವರಿಸಿದ್ದು, ಆ ಪ್ರಕಾರ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಸುರಕ್ಷಿತ ಹೆಲ್ಮೆಟ್ ಅನ್ನು ಧರಿಸುವಂತೆ ನಿರ್ದೇಶನ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!