ಪ್ರಮಾಣವಚನಕ್ಕೆ ಸಕಲ ಸಿದ್ಧತೆ, ಹೇಗೆ ತಯಾರಾಗಿದೆ ಕಂಠೀರವ ಕ್ರೀಡಾಂಗಣ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಮಧ್ಯಾಹ್ನ 12:30ಕ್ಕೆ ಪ್ರಮಾಣವಚನ ಕಾರ್ಯಕ್ರಮ ಆರಂಭವಾಗಲಿದೆ. ಜೋಡೆತ್ತುಗಳ ಜೊತೆ ಎಂಟು ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಬೃಹತ್ ಕಾರ್ಯಕ್ರಮಕ್ಕಾಗಿ ಕ್ರೀಡಾಂಗಣ ಸಜ್ಜಾಗಿದೆ. ವೇದಿಕೆ ಮೇಲೆ 30ಮಂದಿ ಗಣ್ಯರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಇನ್ನು ಶಾಸಕರು, ಅವರ ಕುಟುಂಬ, ವಿವಿಐಪಿ ಹಾಗೂ ಹಿರಿಯರಿಗೆ ವೇದಿಕೆಯ ಮುಂಭಾಗದಲ್ಲಿ ಆಸನ ವ್ಯವಸ್ಥೆ ಮಾಡಲಾಗಿದೆ. ಇನ್ನು ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗಾಗಿ ಸ್ಟೇಡಿಯಂ ಮಧ್ಯಭಾಗದಲ್ಲಿ 40ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಸಾಕಷ್ಟು ಗಣ್ಯರು ಕಾರ್ಯಕ್ರಮದಲ್ಲಿ ಇರುವ ಕಾರಣ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಇನ್ನು ಬರುವ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಊಟ ಹಾಗೂ ತಿಂಡಿಯ ವ್ಯವಸ್ಥೆ ಮಾಡಲಾಗಿದೆ.

ಸಿದ್ದರಾಯಮ್ಮ ಮನೆಯ ಮುಂದೆಯೂ ಅಭಿಮಾನಿಗಳು ಜಮಾಯಿಸಿದ್ದು, ಐದು ಸಾವಿರ ಜನಕ್ಕೆ ತಿಂಡಿ ವ್ಯವಸ್ಥೆ ಮಾಡಿದ್ದಾರೆ. ಇನ್ನು ಪ್ರಮಾಣವಚನ ಕಾರ್ಯಕ್ರಮದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲಿದ್ದು, ಸಿಇಟಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ದಟ್ಟಣೆಯಲ್ಲಿ ಸಿಲುಕಿಕೊಂಡರೆ ಪೊಲೀಸರಿಗೆ ಹಾಲ್ ಟಿಕೆಟ್ ತೋರಿಸಬಹುದಾಗಿದೆ, ಇನ್ನು ಮಧ್ಯಾಹ್ನ ಊಟಕ್ಕೆ ಎಲ್ಲೂ ಹೋಗುವ ಅವಶ್ಯಕತೆ ಬಾರದೇ ಇರಲಿ ಎಂದು ಪರೀಕ್ಷಾ ಕೇಂದ್ರದಲ್ಲಿಯೇ ಮಧ್ಯಾಹ್ನದ ಊಟ ವ್ಯವಸ್ಥೆ ಮಾಡಲಾಗಿದೆ.

ಕಂಠೀರವ ಸ್ಟೇಡಿಯಂ ಸುತ್ತಮುತ್ತ ನೂತನ ಸಚಿವರು, ಡಿಕೆಶಿ ಹಾಗೂ ಸಿದ್ದು ಫ್ಲೆಕ್ಸ್ ಹಾಗೂ ಬ್ಯಾನರ್‌ಗಳು ರಾರಾಜಿಸುತ್ತಿವೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಪ್ರಮಾಣವಚನ ಆರಂಭವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!