ಸ್ಮರಣೀಯ ಯುವ ಉತ್ಸವಕ್ಕೆ ಸಕಲ ಸಿದ್ಧತೆ: ಪಿಎಂ ಮೋದಿ ಉದ್ಘಾಟನೆ

ಹೊಸದಿಗಂತ ವರದಿ,ಧಾರವಾಡ:

ಸ್ವಾಮಿ ವಿವೇಕಾನಂದ ಜಯಂತಿ ನಿಮಿತ್ಯ ನಡೆಯುವ ರಾಷ್ಟ್ರೀಯ 26ನೇ ಯುವಜನೋತ್ಸವಕ್ಕೆ ಭರದ ಸಿದ್ಧತೆ ನಡೆದಿದ್ದು, ಜ.12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸುವರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಉತ್ಸವದ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ್ದು, ದೇಶದ 28 ರಾಜ್ಯಗಳು, ಎಂಟು ಕೇಂದ್ರಾಡಳಿತ ಪ್ರದೇಶಗಳ ಸುಮಾರು 7,500 ಯುವ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಕೇಂದ್ರ-ರಾಜ್ಯ ಕ್ರೀಡಾ ಇಲಾಖೆ ನೇತೃತ್ವದಲ್ಲಿ ಬೇರೆ-ಬೇರೆ ಚಟವಟಿಕೆಗಳ ಸಿದ್ಧತೆ ನಡೆದಿವೆ. ಎಲ್ಲಾ ಚಟವಟಿಕೆ ಧಾರವಡದಲ್ಲಿ ನಡೆಯಲಿವೆ. 30 ಸಾವಿರ ಜನರು ಬರುವ ನಿರೀಕ್ಷೆ ಇದೆ. ಈಗಾಗಲೇ 5,500 ಜನ ನೋಂದಾಯಿಸಿದ್ದಾರೆ ಎಂದು ತಿಳಿಸಿದರು.

ಅನ್ಯ ರಾಜ್ಯಗಳಿಂದ ಬರುವ ಯುವಕರು, ಗಣ್ಯರು ಅತಿಥಿಗಳಿಗೆ ಕೆಸಿಡಿ, ಕೆಯುಡಿ ಹಾಗೂ ಕೃವಿವಿಯಲ್ಲಿ ವಸತಿ ವ್ಯವಸ್ಥೆ ಕಲ್ಪಿಸಿದೆ. ಯಾವುದೇ ತೊಂದರೆ ಆಗದಂತೆ ವಸತಿ, ಸಾರಿಗೆ, ನೀರು ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯ ಒದಗಿಸುತ್ತಿದೆ ಎಂದರು.

ಜ.12ರಂದು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಯುವಜನೋತ್ಸವಕ್ಕೆ ಚಾಲನೆ ನೀಡುವರು. ಅಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅವರಿಗೆ ಅದ್ದೂರಿ ಸ್ವಾಗತ ಕೋರಲಿದೆ. ಅಲ್ಲದೇ, 7,500 ಯುವಕರು ಪಥಸಂಚಲನ ಮಾಡಲಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!