ಎಲ್ಲ ಆರೋಪಿಗಳಿಗೂ ಮರಣದಂಡನೆಯಾಗಬೇಕು: ಪ್ರವೀಣ್ ನೆಟ್ಟಾರು ಪತ್ನಿ ನೂತನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಇತ್ತ ಮುಸ್ತಫಾ ಬಂಧನಕ್ಕೆ ಪ್ರವೀಣ್ ನೆಟ್ಟಾರು ಪತ್ನಿ ನೂತನ ಸಂತಸ ವ್ಯಕ್ತಪಡಿಸಿದ್ದು, ಅವನು ಕೊನೆಗೂ ಸಿಕ್ಕಿರೋದಕ್ಕೆ ನಮಗೆ ತುಂಬಾ ಖುಷಿಯಾಗಿದೆ. ಈ ಪ್ರಕರಣದಲ್ಲಿ ಎಲ್ಲ ಆರೋಪಿಗಳಿಗೂ ಮರಣದಂಡನೆಯಾಗಬೇಕು. ಇಡೀ ದೇಶದಲ್ಲಿ ಈ ಪ್ರಕರಣವೇ ಅಂತಿಮವಾಗಬೇಕು, ಮುಂದೆ ಸಮಾಜದಲ್ಲಿ ಇಂತಹ ಪ್ರಕರಣ ಮರುಕಳಿಸಬಾರದು. ಅವನ ಬಂಧನದಿಂದ ನಮ್ಮ ಕುಟುಂಬದವರಿಗೂ ಸಂತಸ ಕುಟುಂಬದ ಪರವಾಗಿ ಎನ್‌ಐಎ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು.

ಪ್ರಕರಣ ನಡೆದು ಎರಡು ವರ್ಷವಾದರೂ ಆರೋಪಿಗಳನ್ನ ಬಂಧಿಸಲು ಎನ್ಐಎ ಅಧಿಕಾರಿಗಳು ತುಂಬಾ ಪ್ರಯತ್ನ ಪಡುತ್ತಿದ್ದಾರೆ. ಎನ್‌ಐಎ ಸಂಸ್ಥೆಯ ಮೇಲೆ ನಮಗೆ ನಂಬಿಕೆ ಇದೆ. ಎಲ್ಲ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ. ಆದರೆ ಈ ಪ್ರಕರಣದಲ್ಲಿ ಆರೋಪಿಗಳಿಗೆ ನೀಡುವ ಶಿಕ್ಷೆ ಒಂದು ಪಾಠವಾಗಬೇಕು. ಎಸ್‌ಡಿಪಿಐ, ಪಿಎಫ್‌ಐ ಕಾರ್ಯಕರ್ತರು ಮುಂದೆ ಯಾವತ್ತೂ ಇಂತಹ ಕೃತ್ಯಕ್ಕೆ ಕೈಹಾಕಬಾರದು ಅಂತಹ ಶಿಕ್ಷೆ ಆರೋಪಿಗಳಿಗೆ ನೀಡಬೇಕು ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!