ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಡಳಿತ ವ್ಯವಸ್ಥೆಯ ಕೈವಾಡ ಇಲ್ಲದೆ ಇದೆಲ್ಲ ಆಗಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಸೂಚನೆಯಂತೆ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಈಗ ರೈತರಿಗೆ ಕೊಟ್ಟ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ ಎಂದು ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಆರೋಪಿಸಿದ್ದಾರೆ.
ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರಾಗಿರುವ ಅವರು ಹುಬ್ಬಳ್ಳಿಗೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು.
ಬಳಿಕ ಮಾತನಾಡಿದ ಅವರು, ರೈತರ ಜಮೀನು, ದೇಗುಲ, ಪಾರಂಪರಿಕ ತಾಣಗಳ ದಾಖಲೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ. ಎಲ್ಲ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿ ವರದಿ ತಯಾರಿಸುತ್ತೇವೆ ಎಂದು ಜಗದಾಂಬಿಕಾ ಪಾಲ್ ತಿಳಿಸಿದ್ದಾರೆ.