ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್‌ನ ಅಜಯ ಮಾಕನ್, ಚಂದ್ರಶೇಖರ್ ಹಾಗೂ ಸೈಯ್ಯದ್ ನಾಸಿರ್ ಹುಸೇನ್ ರಾಜ್ಯಸಭಾ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚುನಾವಣೆಯಲ್ಲಿ ಸ್ಪರ್ಧಿಸುವವರೆಲ್ಲರೂ ಗೆಲ್ಲಬೇಕು ಎಂದು ಬಯಸುತ್ತಾರೆ ಯಾರು ಸೋಲನ್ನು ಸಹಿಸಲ್ಲ. ನಮ್ಮ ಎಲ್ಲಾ ಶಾಸಕರು ಕಾಂಗ್ರೆಸ್‌ಗೆ ನಿಷ್ಠರಾಗಿ ಮತ ಹಾಕಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ. ನಮ್ಮ ಶಾಸಕರಿಗೆ ಆಮಿಷ ಒಡ್ಡಿ ಬೆದರಿಕೆ ಹಾಕಿದ್ದಾರೆ. ಅದಕ್ಕೆ ಎಲ್ಲರೂ ಒಗ್ಗಟ್ಟಾಗಿ ಮತ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.