ಮಸೀದಿಗಳ ಧ್ವನಿವರ್ಧಕ ಮೂಲಭೂತ ಹಕ್ಕಲ್ಲ ಎಂದ ಅಲಹಾಬಾದ್ ಹೈಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:
‘ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ’ ಎಂದು ಅಲಹಾಬಾದ್‌ ಉಚ್ಚ ನ್ಯಾಯಾಲಯ ಹೇಳಿದೆ. ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

ಧ್ವನಿವರ್ಧಕಗನ್ನು ತೆರವು ಗೊಳಿಸುವಂತೆ ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಇರ್ಫಾನ್ ಎಂಬ ವ್ಯಕ್ತಿಯು ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿ ಎಸ್‌ಡಿಎಂ ಆದೇಶವು “ಕಾನೂನುಬಾಹಿರ” ಮತ್ತು ಇದು “ಮೂಲಭೂತ ಹಕ್ಕುಗಳು ಮತ್ತು ಕಾನೂನು ಹಕ್ಕುಗಳನ್ನು ಉಲ್ಲಂಘಿಸುತ್ತದೆ” ಎಂದು ಆರೋಪಿಸಿದ್ದರು.

ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ವಿವೇಕ್ ಕುಮಾರ್ ಬಿರ್ಲಾ ಮತ್ತು ನ್ಯಾಯಮೂರ್ತಿ ವಿಕಾಸ್ ಅವರಿದ್ದ ವಿಭಾಗೀಯ ಪೀಠವು ಬುಧವಾರ ಈ ಆದೇಶ ನೀಡಿದ್ದು, ‘‘ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದು ಸಾಂವಿಧಾನಿಕ ಹಕ್ಕು ಅಲ್ಲ ಎಂದು ಕಾನೂನು ಹೇಳುತ್ತದೆ” ಎನ್ನುವ ಮೂಲಕ ಅರ್ಜಿಯನ್ನು ತಳ್ಳಿಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!