ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್‌ ರೇವಣ್ಣನನ್ನು ಠಾಣೆಗೆ ಕರೆ ತಂದ ಪೊಲೀಸರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ನನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದಿದ್ದಾರೆ

ಹಾಸನದ ಸಿಇಎನ್ ಠಾಣೆಯಲ್ಲಿ ಸೂರಜ್ ರೇವಣ್ಣ ಅವರ ವಿಚಾರಣೆ ನಡೆಸಲಾಗಿದೆ. ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸೂರಜ್ ರೇವಣ್ಣ ವಿಚಾರಣೆ ಎದುರಿಸುತ್ತಿದ್ದಾರೆ.

ಯುವಕನ ವಿರುದ್ಧ ಬ್ಲಾಕ್ ಮೇಲ್ ಆರೋಪದಲ್ಲಿ ನಿನ್ನೆ ಸೂರಜ್ ಆಪ್ತ ಶಿವಕುಮಾರ್ ನೀಡಿದ್ದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆಗಾಗಿ ಸೂರಜ್ ರೇವಣ್ಣ ಸಿಇಎನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ವಿಚಾರಣೆ ಬಳಿಕ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!