ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ: CID ತನಿಖೆಗೆ ಸರಕಾರ ನಿರ್ಧಾರ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಆರೋಪಗಳ ತನಿಖೆಗೆ ಸರಕಾರ ನಿರ್ಧರಿಸಿದ್ದು, ಅಧಿಕಾರಿಗಳ ಪತ್ರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ತೀರ್ಮಾನಿಸಿದೆ.

ಅಧಿಕಾರಿಗಳು ಬರೆದ ಪತ್ರ ನಕಲಿಯೋ ಅಸಲಿಯೋ ಗೊತ್ತಾಗಿಲ್ಲ.ಸದ್ಯ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಬೇಕಾಗಿದೆ.

ಲಂಚಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯಜಿಲ್ಲೆಯ ಮಂಡ್ಯ, ಮಳವಳ್ಳಿ, ಕೆ.ಆರ್. ಪೇಟೆ, ಪಾಂಡವಪುರ, ಶ್ರೀರಂಗಪಟ್ಟಣ, ನಾಗಮಂಗಲ, ಮದ್ದೂರು ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಸಚಿವ ಚಲುವರಾಯಸ್ವಾಮಿ ಅವರು 6 ರಿಂದ 8 ಲಕ್ಷ ರೂ.ವರೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!