ಗುರುಪತ್‌ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚು ಆರೋಪ: ಮೊದಲ ಬಾರಿ ಮಾತನಾಡಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಪನ್ನುನ್ ಹತ್ಯೆಯ ಅಮೆರಿಕದ ಆರೋಪಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ನಾವು ಪುರಾವೆಗಳನ್ನು ನೋಡುತ್ತೇವೆ, ಇಂತಹ ಘಟನೆಗಳಿಂದ ನಮ್ಮ ಮತ್ತು ಅಮೆರಿಕದ ಸಂಬಂಧ ಹಳಿತಪ್ಪುದಿಲ್ಲ ಎಂದು ಹೇಳಿದ್ದಾರೆ.

ಇಂಗ್ಲೆಂಡ್‌ ಮೂಲದ ದಿ ಫೈನಾನ್ಷಿಯಲ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ, ಪಿಎಂ ಮೋದಿ ಭಾರತ ಮತ್ತು ಯುಎಸ್ ನಡುವಿನ ಸಂಬಂಧಗಳು ಕೆಲವು ಘಟನೆಗಳಿಂದ ಹಳಿತಪ್ಪುವುದಿಲ್ಲ ಎಂದು ಹೇಳಿದರು.

ನವೆಂಬರ್ 29 ರಂದು, 52 ವರ್ಷದ ಭಾರತೀಯ ಪ್ರಜೆ ನಿಖಿಲ್ ಗುಪ್ತಾ, ಪನ್ನುನ್‌ನನ್ನು ಕೊಲ್ಲಲು ನಡೆಸಿದ ವಿಫಲ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್‌ಗಳಿಂದ ಆರೋಪ ಹೊರಿಸಲಾಯಿತು.

ಸಂದರ್ಶನದ ವೇಳೆ, ಪ್ರಧಾನಿ ಮೋದಿ ಅವರು ಸಾಗರೋತ್ತರ ಉಗ್ರಗಾಮಿ ಗುಂಪುಗಳ ಚಟುವಟಿಕೆಗಳ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಿ, ಅಭಿವ್ಯಕ್ತಿ ಸ್ವಾತಂತ್ರ್ಯದ ಸೋಗಿನಲ್ಲಿ ಬೆದರಿಕೆಯಲ್ಲಿ ತೊಡಗಿದ್ದಾರೆ ಮತ್ತು ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆ ಎಂದು ಹೇಳಿದರು.

ಭದ್ರತೆ ಮತ್ತು ಭಯೋತ್ಪಾದನೆ ನಿಗ್ರಹ ಸಹಕಾರವು ಭಾರತ ಮತ್ತು ಯುಎಸ್ ನಡುವಿನ ಬಾಂಧವ್ಯದ ಪ್ರಮುಖ ಅಂಶವಾಗಿದೆ . ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳೊಂದಿಗೆ ಕೆಲವು ಘಟನೆಗಳನ್ನು ಜೋಡಿಸುವುದು ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ಈ ಬಗ್ಗೆ ನಮಗೆ ಯಾರಾದರೂ ಯಾವುದೇ ಮಾಹಿತಿ ನೀಡಿದರೆ, ನಾವು ಅದನ್ನು ಖಂಡಿತವಾಗಿ ಪರಿಶೀಲಿಸುತ್ತೇವೆ. ನಮ್ಮ ನಾಗರಿಕರು ಏನಾದರೂ ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡಿದ್ದರೆ ಅದನ್ನು ಖಂಡಿತ ಗಮನಿಸುವ ಕೆಲಸ ಮಾಡುತ್ತೇವೆ. ಕಾನೂನು ಸುವ್ಯವಸ್ಥೆಗೆ ನಮ್ಮ ಬದ್ಧತೆ ಎಂದು ಮೋದಿ ಸಂದರ್ಶನದಲ್ಲಿ ಹೇಳಿದ್ದಾರೆ.

ಭಾರತ-ಅಮೆರಿಕ ಭದ್ರತೆ ಮತ್ತು ಭಯೋತ್ಪಾದನೆ ನಿಗ್ರಹ ಸಹಕಾರವು ಪ್ರಮುಖವಾಗಿದೆ. ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳೊಂದಿಗೆ ಈ ಘಟನೆಗಳನ್ನು ಜೋಡಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ. ನಾವು ಬಹುಪಕ್ಷೀಯತೆಯ ಯುಗದಲ್ಲಿ ಬದುಕುತ್ತಿದ್ದೇವೆ ಎಂಬ ಸತ್ಯವನ್ನು ಒಪ್ಪಿಕೊಳ್ಳಬೇಕು. ಜಗತ್ತು ಪರಸ್ಪರ ಸಂಬಂಧ ಮತ್ತು ಪರಸ್ಪರ ಅವಲಂಬಿತವಾಗಿದೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು ಸಿಖ್ಸ್ ಫಾರ್ ಜಸ್ಟೀಸ್‌ನ ನಾಯಕ ಎಂದು ಗುರುತಿಸಿಕೊಂಡಿರುವ ಗುರುಪತ್‌ವಂತ್ ಸಿಂಗ್ ಪನ್ನುನ್​​ನ್ನು ಹತ್ಯೆ ಮಾಡಲು ಭಾರತ ತನ್ನ ಅಧಿಕಾರಿಗಳ ನೇಮಕ ಮಾಡಿದೆ ಎಂದು ಯುಎಸ್​​​​ ಆರೋಪ ಮಾಡಿತ್ತು. ಪನ್ನುನ್ ಹತ್ಯೆಗಾಗಿ ಭಾರತ ರಹಸ್ಯ ಏಜೆಂಟ್ ಗುಪ್ತನ್ನು ನೇಮಕಾ ಮಾಡಿದೆ ಎಂದು ಹೇಳಿತ್ತು. ಇದೀಗ ಆರೋಪಕ್ಕೆ ಪ್ರಧಾನಿ ಮೋದಿ ಅವರು ಸಂದರ್ಶನದಲ್ಲಿ ಉತ್ತರ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!