ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರ ಆರೋಪ: ಪ್ರಧಾನಿ ಮೋದಿಗೆ ಪತ್ರ ಬರೆದ ರುಪ್ಸಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪತ್ರ ಬರೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ.8 ಅಂಶಗಳನ್ನು ಉಲ್ಲೇಖ ಮಾಡಿ ಪತ್ರ ಬರೆಯಲಾಗಿದೆ. ಆರ್ ಆರ್ ನೀಡಲು ಲಂಚ ಪಡೆಯಲಾಗುತ್ತಿದೆ. 10 ವರ್ಷಗಳಿಗೊಮ್ಮೆ ಮಾನ್ಯತೆ ನವೀಕರಣ ಹೊಂದಿರಬೇಕೆಂದು ಹೈಕೋರ್ಟ್ ಹೇಳಿದೆ ಆದರೆ 2 ವರ್ಷಕ್ಕೊಮ್ಮೆ ಲಂಚ ಪಡೆಯುತ್ತಿರುವ ಅಧಿಕಾರಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನೂ ಸಚಿವ ಸಂಪುಟದಿಂದ ಕೈಬಿಡುವಂತೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮೂರನೇ ಬಾರಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತಿದ್ದೇನೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ವಜಾಗೊಳಿಸದಿದ್ದರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!