October 31, 2026
Saturday, October 31, 2026
spot_img

ಕಾನೂನುಬಾಹಿರವಾಗಿ ಕರ್ತವ್ಯ ನಿರ್ವಹಿಸಿರುವ ಆರೋಪ : ಬೆಳಗಾವಿ ಪಾಲಿಕೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ

ಹೊಸದಿಗಂತ ವರದಿ ಬೆಳಗಾವಿ:

ಮಹಾನಗರ ಪಾಲಿಕೆಯಲ್ಲಿ ಕೆಲ ಅಧಿಕಾರಿಗಳು ಕಾನೂನುಬಾಹಿರವಾಗಿ ಕರ್ತವ್ಯ ನಿರ್ವಹಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ, ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಹಾಗೂ ಲೋಕಾಯುಕ್ತರಿಗೆ ದೂರು ಸಲ್ಲಿಸಲು ಪಾಲಿಕೆ ಪರಿಷತ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮೇಯರ್ ಪ್ರೀತಿ ಕಾಮಕರ ತಿಳಿಸಿದರು.

ಬುಧವಾರ ನಡೆದ ಮಹಾನಗರ ಪಾಲಿಕೆ ಪರಿಷತ್ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು. ಪಾಲಿಕೆಯ ಆಡಳಿತ ವ್ಯವಸ್ಥೆಯಲ್ಲಿ ನಿಯಮಾನುಸಾರ ಕರ್ತವ್ಯ ನಿರ್ವಹಿಸುವುದು ಅಗತ್ಯವಾಗಿದ್ದು, ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸಿರುವ ಅಧಿಕಾರಿಗಳ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
ಅಧಿಕಾರಿಗಳ ಕರ್ತವ್ಯ ನಿರ್ವಹಣೆ ಹಾಗೂ ಆಡಳಿತಾತ್ಮಕ ವಿಚಾರಗಳ ಕುರಿತು ಸದಸ್ಯರು ಸಭೆಯಲ್ಲಿ ಪ್ರಶ್ನೆಗಳನ್ನು ಎತ್ತಿದರು.

ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದರ ಜೊತೆಗೆ, ಅಗತ್ಯವಿದ್ದಲ್ಲಿ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲು ನಿರ್ಧರಿಸಲಾಗಿದೆ ಎಂದು ಮೇಯರ್ ಪ್ರೀತಿ ಕಾಮಕರ ಹೇಳಿದರು.
ಪಾಲಿಕೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ನಿಯಮ ಪಾಲನೆಗೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

Must Read