ವಿದೇಶಿ ವಿನಿಮಯ ಉಲ್ಲಂಘನೆ ಆರೋಪ: ಬಿಬಿಸಿ ವಿರುದ್ಧ ಪ್ರಕರಣ ದಾಖಲಿಸಿದ ಇಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ (ಎಫ್​ಇಎಂಇ) ಉಲ್ಲಂಘನೆ ಆರೋಪದ ಅಡಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಿಬಿಸಿ ವಿರುದ್ಧ ಪ್ರಕರಣ ದಾಖಲಿಸಿದೆ.

ಬಿಬಿಸಿಯ ಇಬ್ಬರು ಹಿರಿಯ ಅಧಿಕಾರಿಗಳನ್ನು ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚನೆ ನೀಡಿದೆ.

ಗುಜರಾತ್​ ಗಲಭೆ ಕುರಿತ ಸಾಕ್ಷ್ಯಾಚಿತ್ರ ಬಿಡುಗಡೆ ಮಾಡಿ ಭಾರತದಲ್ಲಿ ವಿವಾದದ ಅಲೆ ಎಬ್ಬಿಸಿದ್ದ ಬ್ರಿಟಿಷ್​ ಬ್ರಾಡ್​ಕಾಸ್ಟಿಂಗ್​ ಸರ್ವೀಸ್​ (ಬಿಬಿಸಿ)ನ ದೆಹಲಿ ಕಚೇರಿಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಫೆ.14ರಂದು ದಾಳಿ ನಡೆಸಿತ್ತು. ಅಂತಾರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಬಿಬಿಸಿ ಕಚೇರಿಗಳಲ್ಲಿ ಶೋಧ ನಡೆಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!